ಪ್ರಜಾಸ್ತ್ರ ಸುದ್ದ
ಮಂಡ್ಯ(Mandaya): ಸೋಮವಾರ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಕೆಎಸ್ಆರ್ ಟಿಸಿ(KSRTC) ಬಸ್ ಭೀಕರ ಅಪಘಾತವಾಗಿದೆ. ಇದರಿಂದಾಗಿ 20ಕ್ಕೂ ಹೆಚ್ಚು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಬೆಂಗಳೂರಿನಿಂದ ಮಂಡ್ಯ ಕಡೆಗೆ ಹೊರಟಿದ್ದ ಬಸ್ ಸಾಂಜೋ ಆಸ್ಪತ್ರೆ ಹತ್ತಿರ ಹೆದ್ದಾರಿಯ ಸರ್ವಿಸ್ ರಸ್ತೆಯಲ್ಲಿ ತಿರುವು ಪಡೆಯುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ನಿಂತಿದ್ದ ಕಂಟೇನರ್ ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ.
ಬಸ್(Bus Accident) ಪಲ್ಟಿಯಾದ ಪರಿಣಾಮ ಪ್ರಯಾಣಿಕರೆಲ್ಲ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಮಿಮ್ಸ್ ಆಸ್ಪತ್ರೆಗೆ ದಾಖಲಾಗಿದೆ. ಈ ಬಗ್ಗೆ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.