ಪ್ರಜಾಸ್ತ್ರ ಸುದ್ದಿ
ಕೋಲ್ಕತ್ತಾ(Kolkata): ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ ಬಳಿಕ ಸಾಕಷ್ಟು ಹಿಂಸಾಚಾರ ಘಟನೆಗಳು ನಡೆಯುತ್ತಿವೆ. ಬಿಜೆಪಿ ನಾಯಕ ಸುವೇಂದು ಅಧಿಕಾರಿ ನೂತನ ಸಿಎಂ ಎಂದು ಹೇಳಲಾಗುತ್ತಿದೆ. ಈ ಹೊತ್ತಿನಲ್ಲಿ ಇವರ ಆಪ್ತ ಚಂದ್ರನಾಥ್ ರಥ್ ಅವರನ್ನು ಭೀಕರವಾಗಿ ಹತ್ಯೆ ಮಾಡಲಾಗಿದೆ. ಉತ್ತರ ಪರಗಣ್ 24 ಜಿಲ್ಲೆಯಲ್ಲಿ ಚಂದ್ರನಾಥ್(41) ಇವರನ್ನು ನಿನ್ನೆ ಕೊಲೆ ಮಾಡಲಾಗಿದೆ.
ಈ ಬಗ್ಗೆ ಮಾತನಾಡಿರುವ ಸುವೇಂದು, ಇದೊಂದು ಪೂರ್ವನಿಯೋಜಿತ ಕೃತ್ಯ ಎಂದಿದ್ದಾರೆ. ಕಳೆದ 15 ವರ್ಷಗಳಿಂದ ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿರುವ ತೃಣಮೂಲ ಕಾಂಗ್ರೆಸ್ಸಿನ ಮಹಾಜಂಗಲ್ ರಾಜ್ ನ ಪ್ರತಿಫಲ ಅಂತಾ ವಾಗ್ದಾಳಿ ನಡೆಸಿದ್ದಾರೆ. ಕೊಲೆ ಮಾಡುವುದಕ್ಕೂ ಮೊದಲು ದುಷ್ಕರ್ಮಿಗಳು ಸ್ಥಳಕ್ಕೆ ಭೇಟಿ ನೀಡಿ ಯೋಜನೆ ಸಿದ್ಧಪಡಿಸಿದ್ದರು. ಬಸಿರ್ಹತ್ ಹಾಗೂ ಬರಾನಗರದಲ್ಲಿಯೂ ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆಗಳು ನಡೆದಿವೆ. ಪೊಲೀಸರು ತನಿಖೆ ನಡೆಸುತ್ತಿದ್ದು, ನಾವು ಯಾವುದೇ ನಿರ್ಧಾರಕ್ಕೆ ಬರಲು ಸಾಧ್ಯವಿಲ್ಲ ಎಂದಿದ್ದಾರೆ.




