ಪ್ರಜಾಸ್ತ್ರ ಸುದ್ದಿ
ರಾಯಚೂರು(Raichoru): ಕೌಟುಂಬಿಕ ಕಲಹದ ಹಿನ್ನಲೆಯಲ್ಲಿ ತಾಯಿಯನ್ನೇ ಮಗ ಭೀಕರವಾಗಿ ಕೊಲೆ ಮಾಡಿರುವ ಘಟನೆ ನಡೆದಿದೆ. ಜಿಲ್ಲೆಯ ಮಸ್ಕಿ ತಾಲೂಕಿನ ಜಕ್ಕೇರುಮಡು ತಾಂಡಾದಲ್ಲಿ ನಡೆದಿದೆ. ಚೆಂದವ್ವ(55) ಕೊಲೆಯಾದ ಮಹಿಳೆಯಾಗಿದ್ದಾರೆ.
ಚೆಂದವ್ವ ಮಗ ಕುಮಾರ ತಾಯಿಯನ್ನು ಕೊಲೆ ಮಾಡಿದ್ದಾನೆ. ತಲೆ ಮೇಲೆ ಕಲ್ಲು ಎತ್ತಾಕಿ ಭೀಕರವಾಗಿ ಹತ್ಯೆ ಮಾಡಿದ್ದಾನೆ. ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದು, ಹೊಲದ ವಿಚಾರವಾಗಿ ಈ ಕೃತ್ಯವೆಸಗಿದ್ದಾನೆ ಎಂದು ಹೇಳಲಾಗುತ್ತಿದೆ. ಮುದುಗಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಕೊಲೆ ನಡೆದಿದೆ.




