ಭಯೋತ್ಪಾದನೆ ನಿಗ್ರಹಕ್ಕೆ ಪ್ರಧಾನಿ ಸೂಚನೆ

91

ಪ್ರಜಾಸ್ತ್ರ ಸುದ್ದಿ

ನವದೆಹಲಿ: ಯಾತ್ರಿಗಳನ್ನು ಕರೆದುಕೊಂಡು ಹೋಗುತ್ತಿದ್ದ ಬಸ್ ಮೇಲೆ ನಡೆದ ದಾಳಿ ಸೇರಿದಂತೆ ಸರಣಿ ಭಯೋತ್ಪಾದನಾ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಪ್ರಧಾನಿ ಮೋದಿ ಗುರುವಾರ ಪ್ರಗತಿ ಪರಿಶೀಲನಾ ಸಭೆ ನಡೆಸಿದರು.

ಕಣಿವೆ ನಾಡಿನಲ್ಲಿ ಭಯೋತ್ಪಾದನೆ ನಿಗ್ರಹಕ್ಕೆ ತಮ್ಮ ಸಂಪೂರ್ಣ ಶಕ್ತಿಯನ್ನು ಉಪಯೋಗಿಸಿ ಎಂದು ಸೂಚನೆ ನೀಡಿದರು. ಇದಕ್ಕೆ ಸಂಬಂಧಿಸಿದಂತೆ ಹೆಚ್ಚುವರಿ ಭದ್ರತಾ ಸಿಬ್ಬಂದಿ ನಿಯೋಜಿಸುವಂತೆ, ಉಗ್ರರನ್ನು ಮಟ್ಟ ಹಾಕುವ ಕುರಿತಂತೆ ಅಧಿಕಾರಿಗಳೊಂದಿಗೆ ಚರ್ಚಿಸಿದರು.

ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಡೋವಲ್ ಸೇರಿ ಹಲವು ಅಧಿಕಾರಿಗಳು ಭಾಗವಹಿಸಿದ್ದರು. ಕಳೆದ ನಾಲ್ಕು ದಿನಗಳಲ್ಲಿ 4 ಕಡೆ ಭಯೋತ್ಪಾದಕರು ದಾಳಿ ನಡೆಸಿದ್ದಾರೆ. 9 ಯಾತ್ರಿಗಳು ಪ್ರಾಣ ಕಳೆದುಕೊಂಡಿದ್ದಾರೆ. 7 ಮಂದಿ ಭದ್ರತಾ ಸಿಬ್ಬಂದಿ, ಸಿಎಆರ್ ಪಿಎಫ್ ನ ಓರ್ವ ಯೋಧ ಗಾಯಗೊಂಡಿದ್ದಾರೆ.
error: Content is protected !!