ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ದೇಶದ ನಾನಾ ಭಾಗಗಳಲ್ಲಿ ಭಯೋತ್ಪಾದನೆ ಸಂಚು ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ಐಎ ಶೋಧ ನಡೆಸಿದೆ. ಕರ್ನಾಟಕ ಸೇರಿದಂತೆ ಮಹಾರಾಷ್ಟ್ರ, ಬಿಹಾರ, ಉತ್ತರ ಪ್ರದೇಶ, ಜಮ್ಮು ಮತ್ತು ಕಾಶ್ಮೀರ ಹಾಗೂ ಕೇಂದ್ರಾಡಳಿತ ಪ್ರದೇಶದ 21 ಪ್ರದೇಶಗಳಲ್ಲಿ ಶೋಧ ಕಾರ್ಯ ನಡೆಸಲಾಗಿದೆ.
ತಮಿಳುನಾಡಿನ ಚೆಂಗಲ್ ಪಟ್ಟು ಜಿಲ್ಲೆಯ ಕಾಯರ್ ಪೊಲೀಸ್ ಠಾಣೆಯಲ್ಲಿ ಜೂನ್ ತಿಂಗಳಲ್ಲಿ ದಾಖಲಾದ ಪ್ರಕರಣದ ಹೊಣೆಯನ್ನು ಎನ್ಐಎ ವಹಿಸಿಕೊಂಡಿದೆ. ಭಯೋತ್ಪಾದಕ ಕೃತ್ಯವೆಸಗುವ ಸಂಚು ರೂಪಿಸಿದ್ದ ಆರೋಪದ ಮೇಲೆ ಅಖ್ಲಾಥೂರ್ ಅಲಿಯಾಸ್ ಮೊಹಮ್ಮದ್ ಅಖ್ಲಾಕ್ ಎಂಬಾತನ ಬಂಧನದ ಬಳಿಕ ಪ್ರಕರಣ ಬೆಳಕಿಗೆ ಬಂದಿದೆ. ಈತ ಪಾಕಿಸ್ತಾನ ಹಾಗೂ ಸಿರಿಯಾದ ಅನೇಕ ಸಂಘಟನೆಗಳೊಂದಿಗೆ ಸಂಪರ್ಕ ಹೊಂದಿರುವುದು ತಿಳಿದು ಬಂದಿದೆ.