ಪ್ರಜಾಸ್ತ್ರ ಸುದ್ದಿ
ಚೆನ್ನೈ(Chennai): ತಮಿಳುಚಿತ್ರರಂಗದ ಸೂಪರ್ ಸ್ಟಾರ್ ರಜನಿಕಾಂತ್(Rajinikanth) ಆಸ್ಪತ್ರೆಗೆ ದಾಖಲಾಗಿದ್ದಾರೆ. 73 ವರ್ಷದ ಹಿರಿಯ ನಟನ ಆರೋಗ್ಯದಲ್ಲಿ ಏರುಪೇರಾಗಿದ್ದು, ಸೋಮವಾರ ತಡರಾತ್ರಿ ನಗರದ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸಧ್ಯ ಅವರ ಆರೋಗ್ಯದ ಸ್ಥಿತಿ ಸ್ಥಿರವಾಗಿದ್ದು ಆತಂಕ ಪಡುವ ಅಗತ್ಯವಿಲ್ಲವೆಂದು ಹೇಳಲಾಗುತ್ತಿದೆ.
ಈ ಬಗ್ಗೆ ಆಸ್ಪತ್ರೆ ಹಾಗೂ ಕುಟುಂಬದಿಂದ ಯಾವುದೇ ಮಾಹಿತಿ ಬಂದಿಲ್ಲ. ಹೃದಯಕ್ಕೆ ಸಂಬಂಧಿಸಿದ ಸಮಸ್ಯೆ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ಇಂದು ತಪಾಸಣೆ ನಡೆಯಲಿದೆಯಂತೆ. 2020ರಲ್ಲಿ ಅಧಿಕ ರಕ್ತದೊತ್ತಡ ಹಾಗೂ ತೀವ್ರ ಬಳಲಿಕೆಯಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಬೇಗ ಗುಣಮುಖರಾಗಲಿ ಎಂದು ಅಭಿಮಾನಿಗಳು ಹಾರೈಸಿದ್ದಾರೆ.