ಪ್ರಜಾಸ್ತ್ರ ಸುದ್ದಿ
ಹುಬ್ಬಳ್ಳಿ(Hubballi): ಹುಬ್ಬಳ್ಳಿ-ಧಾರವಾಡ(Hubballi-Dharwad) ವ್ಯಾಪ್ತಿಯಲ್ಲಿ ಸುಮಾರು 17 ಕಳ್ಳತನ ಪ್ರಕರಣಗಳಲ್ಲಿ ಆರೋಪಿಯಾಗಿರುವವನು ಪೊಲೀಸರ ಮೇಲೆ ಹಲ್ಲೆ ಮಾಡಿ ತಪ್ಪಿಸಿಕೊಳ್ಳಲು ಯತ್ನಿಸಿದಾಗ ಗುಂಡಿನ ದಾಳಿ ಮಾಡಿ ವಶಕ್ಕೆ ಪಡೆಯಲಾಗಿದೆ. ಬೆಂಡಿಗೇರಿ ಠಾಣೆ ಪೊಲೀಸರು ಕಾಲಿಗೆ ಗುಂಡು ಹಾರಿಸಿ ಆರೋಪಿ ವಿನೋದ್ ಎಂಬಾತನನ್ನು ವಶಕ್ಕೆ ಪಡೆದಿದ್ದಾರೆ.
ಕಳ್ಳತನ ಪ್ರಕರಣದಲ್ಲಿ ಬಂಧಿತನಾಗಿದ್ದ ಆರೋಪಿ ವಿನೋದ್, ತನ್ನ ಸಹಚರರನ್ನು ತೋರಿಸುತ್ತೇನೆಂದು ಹೇಳಿ ಪೊಲೀಸರನ್ನು ಕರೆದುಕೊಂಡು ಹೋಗಿದ್ದಾನೆ. ಹುಬ್ಬಳ್ಳಿಯ ತಾರಿಹಾಳ ಬಳಿ ಬರುತ್ತಿದ್ದಂತೆ ಪೊಲೀಸರ ಮೇಲೆ ಹಲ್ಲೆ ಮಾಡಿ ತಪ್ಪಿಸಿಕೊಳ್ಳಲು ನೋಡಿದ್ದಾನೆ. ಇನ್ಸ್ ಪೆಕ್ಟರ್ ಜಯಶ್ರೀ ಛಲವಾದಿ ಅವರು ವಿನೋದ್ ಕಾಲಿಗೆ ಗುಂಡು ಹಾರಿಸಿದ್ದಾರೆ. ಈತ ಪಿಎಸ್ಐ ಹಾಗೂ ಕಾನ್ಸ್ ಟೇಬಲ್ ರಮೇಶ್ ಹಿತ್ತಲಮನಿ ಮೇಲೆ ಹಲ್ಲೆ ಮಾಡಿ ತಪ್ಪಿಸಿಕೊಳ್ಳಲು ನೋಡಿದ್ದ.




