ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರಿಗೆ ಜೀವ ಬೆದರಿಕೆ ಹಾಕಿದ್ದ ವ್ಯಕ್ತಿಯನ್ನು ಬಂಧಿಸಲಾಗಿದೆ. ಇ-ಮೇಲ್ ಮೂಲಕ ಜೀವ ಬೆದರಿಕೆ ಹಾಕಿದ್ದ. ಇವನನ್ನು ವಿಧಾನಸೌಧ ಠಾಣೆ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಸಿಂಧೂರ್ ರಜಪೂತ್ ಹೆಸರಿನ ಇ-ಮೇಲ್ ಮೂಲಕ ಕೊಲೆ ಮಾಡುವ ಬೆದರಿಕೆ ಹಾಕಿದ್ದ.
ಸಿಎಂ ಹಾಗೂ ಡಿಸಿಎಂ ಅವರನ್ನು ಕೊಂದು ತುಂಡು ತುಂಡಾಗಿ ಕತ್ತರಿಸಿ ಫ್ರಿಡ್ಜ್, ಟ್ರ್ಯಾಲಿ ಬ್ಯಾಗಿನಲ್ಲಿ ತುಂಬುತ್ತೇನೆ ಎಂದು ಮೇಲ್ ಮಾಡಿದ್ದ. ತಾಂತ್ರಿಕ ಮಾಹಿತಿಯ ಮೂಲಕ ಆತನನ್ನು ಬಂಧಿಸಲಾಗಿದೆ. ಆದರೆ, ಆತ ಯಾರು, ಎಲ್ಲಿಯವನು ಸೇರಿದಂತೆ ಯಾವುದೇ ಮಾಹಿತಿ ಬಹಿರಂಗ ಪಡಿಸಿಲ್ಲ. ಈ ಕುರಿತು ವಿಚಾರಣೆ ನಡೆಸಿದ್ದಾರೆ.