ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ನಗರದ ಕಲಾಸಿಪಾಳ್ಯ ಬಸ್ ನಿಲ್ದಾಣದ ಶೌಚಾಲಯದಲ್ಲಿ ಸ್ಫೋಟಕ ವಸ್ತುಗಳನ್ನು ಇಟ್ಟು ಹೋದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಲಾಗಿದೆ. ಕೋಲಾರ ಮೂಲದ ಮುನಿರಾಜ, ಶಿವಕುಮಾರ ಹಾಗೂ ಗಣೇಶ ಬಂಧಿತ ಆರೋಪಿಗಳು ಎಂದು ತಿಳಿದು ಬಂದಿದೆ. ಸಿಸಿಬಿ ಇಂಟಲಿಜೆನ್ಸ್ ಎಟಿಸಿ ತಂಡ, ಕಲಾಸಿಪಾಳ್ಯ ಠಾಣೆಯ ತನಿಖೆಯಲ್ಲಿ ಸಹಾಯ ಮಾಡಿದೆ.
ಕಳೆದ ವಾರ ಕಲಾಸಿಪಾಳ್ಯ ಬಸ್ ನಿಲ್ದಾಣದ ಶೌಚಾಲಯದಲ್ಲಿ ಬ್ಯಾಗ್ ಇಟ್ಟು ಹೋಗಲಾಗಿತ್ತು. ಅದನ್ನು ತೆಗೆದು ನೋಡಿದಾಗ ಅದರಲ್ಲಿ ಸ್ಫೋಟಕ ವಸ್ತುಗಳಾದ ಜಿಲೆಟಿನ್ ಕಡ್ಡಿಗಳು, ಡಿಟೋನೇಟರ್ ಇದ್ದವು. ಈ ಬಗ್ಗೆ ಪ್ರಕರಣ ದಾಖಲಾಗಿ, 6 ತನಿಖಾ ತಂಡಗಳನ್ನು ರಚನೆ ಮಾಡಲಾಗಿತ್ತು. ಇದೀಗ ಮೂವರನ್ನು ವಶಕ್ಕೆ ಪಡೆಯಲಾಗಿದೆ.