ಪ್ರಜಾಸ್ತ್ರ ಸುದ್ದಿ
ರಾಮನಗರ(Ramanagara): ರೌಡಿ ಶೀಟರ್ ಸಂತೋಷ್ ಅಲಿಯಾಸ್ ಸಂತು ಕರಡಿ(31) ಎಂಬಾತನನ್ನು ಜಿಲ್ಲೆಯ ಹಾರೋಹಳ್ಳಿ ಪಟ್ಟಣದ ಕೆಎಸ್ಆರ್ ಟಿಸಿ ಬಸ್ ಡಿಪೋ ಬಳಿ ಶನಿವಾರ ಮುಂಜಾನೆ ಹತ್ಯೆ ಮಾಡಲಾಗಿದೆ. ಮೂರ್ನಾಲ್ಕು ಜನರ ಗುಂಪೊಂದು ಮಾರಕಾಸ್ತ್ರಗಳಿಂದ ದಾಳಿ ಮಾಡಿ ಕೊಲೆ ಮಾಡಿದೆ. ಹಳೆ ದ್ವೇಷದ ಹಿನ್ನಲೆಯಿಂದ ಈ ಕೃತ್ಯ ನಡೆದಿದೆ ಎಂದು ಹೇಳಲಾಗುತ್ತಿದೆ.
ಬೈಕ್ ಮೇಲೆ ಸಂತೋಷ್ ಹೊರಟಿದ್ದಾಗ ಕಾರಿನಲ್ಲಿ ಹಿಂಬಾಲಿಸಿಕೊಂಡು ಬಂದು ಆತನ ಬೈಕ್ ಡಿಕ್ಕಿ ಹೊಡೆದಿದ್ದಾರೆ. ಆತ ಕಳಗೆ ಬೀಳುತ್ತಿದ್ದಂತೆ ಮಾರಕಾಸ್ತ್ರಗಳಿಂದ ತೀವ್ರ ಹಲ್ಲೆ ಮಾಡಿ ಪರಾರಿಯಾಗಿದ್ದಾರೆ. ಗಂಭೀರವಾಗಿ ಗಾಯಗೊಂಡ ಆತ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಈತ ಹಲವು ಅಪರಾಧಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದನಂತೆ. ಹಳೆ ದ್ವೇಷದ ಕಾರಣಕ್ಕೆ ಕೊಲೆ ನಡೆದಿದೆ ಎಂದು ಹೇಳಲಾಗುತ್ತಿದೆ.