ಪ್ರಜಾಸ್ತ್ರ ಸುದ್ದಿ
ಚಿಕ್ಕಬಳ್ಳಾಪುರ(Chikkaballapura): ರಾಜ್ಯದಲ್ಲಿ ನಿತ್ಯ ಒಂದಲ್ಲ ಒಂದು ಕೊಲೆ, ಸುಲಿಗೆ, ದರೋಡೆ ಪ್ರಕರಣಗಳು ನಡೆಯುತ್ತಿದ್ದು, ಜನರು ನೆಮ್ಮದಿ ಕಳೆದುಕೊಂಡಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಒಂದೇ ದಿನದಲ್ಲಿ ಮೂವರು ಹತ್ಯೆಯಾಗಿದೆ. ಗುರುವಾರ ರಾತ್ರಿ, ಶುಕ್ರವಾರ ಮುಂಜಾನೆ ಹಾಗೂ ಮಧ್ಯಾಹ್ನ ಕೊಲೆ ಪ್ರಕರಣಗಳು ನಡೆದಿವೆ. ಇದರಿಂದಾಗಿ ಜಿಲ್ಲೆಯ ಜನರು ಭಯ ಭೀತರಾಗಿದ್ದಾರೆ.
ಚಿಂತಾಮಣಿಯಲ್ಲಿ ಕಳೆದ ರಾತ್ರಿ ರಾಮಸ್ವಾಮಿ ಎಂಬಾತನನ್ನು ಚಾಕುವಿನಿಂದ ಚುಚ್ಚಿ ಕೊಲೆ ಮಾಡಲಾಗಿದೆ. ಮುಂಜಾನೆ ವ್ಯಕ್ತಿಯೊಬ್ಬನ ರುಂಡ ಕತ್ತರಿಸಿ ಭೀಕರವಾಗಿ ಹತ್ಯೆ ಮಾಡಲಾಗಿದೆ. ಮಧ್ಯಾಹ್ನ ವೆಂಕಟಗಿರಿ ಕೋಟೆ ಬಡಾವಣೆಯಲ್ಲಿ ಅಪರಿಚಿತ ಶವ ಪತ್ತೆಯಾಗಿದೆ. ಇದು ಕೊಲೆ ಎಂದು ಶಂಕಿಸಲಾಗಿದೆ. ಹೀಗೆ ಕಳೆದ 24 ಗಂಟೆಯಲ್ಲಿ ಮೂರು ಕೊಲೆಗಳು ನಡೆದಿದ್ದು, ಕರ್ನಾಟಕದಲ್ಲಿ ಏನಾಗುತ್ತಿದೆ? ಕಾನೂನು ಸುವ್ಯವಸ್ಥೆ ಇಷ್ಟೊಂದು ಕೆಟ್ಟಿದ್ಯಾ? ಹೀಗೆಯಾದರೆ ಜನಸಮಾನ್ಯರು ಜೀವನ ನಡೆಸುವುದು ಹೇಗೆ ಎನ್ನುವ ಪ್ರಶ್ನೆ ಮೂಡಿದೆ.