ಪ್ರಜಾಸ್ತ್ರ ಸುದ್ದಿ
ವಿಜಯಪುರ(Vijayapura): ಜಿಲ್ಲೆಯ ಇಂಡಿಯಲ್ಲಿ ಬುಧವಾರ ಮುಂಜಾನೆ ಮಹಿಳೆಯನ್ನು ಹತ್ಯೆ ಮಾಡಲಾಗಿದೆ. ನಗರದ ಟಿಪ್ಪು ಸುಲ್ತಾನ್ ವೃತ್ತದ ಹತ್ತಿರ ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ. ಇಂಡಿ ಸಮಾಜ ಕಲ್ಯಾಣ ಇಲಾಖೆಯ ಮಹಿಳಾ ಸಿಬ್ಬಂದಿ ರೇಣುಕಾ ಸಾಯಬಣ್ಣ ಕನ್ನೊಳ್ಳಿ(30) ಕೊಲೆಯಾದ ಮಹಿಳೆ ಎಂದು ತಿಳಿದು ಬಂದಿದೆ.
ಆರೋಪಿ ಸಂಜು ಬನಸೋಡೆ ಎಂಬಾತ ಮಹಿಳೆ ಮೇಲೆ ಚಾಕುವಿನಿಂದ ಇರಿದು ಪರಾರಿಯಾಗಿದ್ದಾನೆ. ಆಕೆಯನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಾಯಿತು ಆದರೂ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾಳೆ. ಸ್ಥಳಕ್ಕೆ ಇಂಡಿ ಶಹರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆ ಕೈಗೊಂಡಿದ್ದಾರೆ.