ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaluru): ಕಳೆದ ಬುಧವಾರ ಹುಳಿಮಾವು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ನಿಶ್ಚಿತ್ ಅನ್ನೋ ಬಾಲಕನ ಅಪಹರಣ ಹಾಗೂ ಕೊಲೆ ಪ್ರಕರಣ ಸಂಬಂಧ ಇಬ್ಬರನ್ನು ಈಗಾಗ್ಲೇ ಬಂಧಿಸಲಾಗಿದೆ. ಗುರುಮೂರ್ತಿ ಹಾಗೂ ಗೋಪಾಲಕೃಷ್ಣ ಬಂಧಿತರು. ಪೊಲೀಸರು ಕೊಲೆ ರಹಸ್ಯವನ್ನು ಬಯಲಿಗೆಳೆದಿದ್ದು, ಸೈಕೋ ಗುರುಮೂರ್ತಿಯ ಘೋರಕೃತ್ಯಕ್ಕೆ ಬಾಲಕ ಬಲಿಯಾಗಿದ್ದಾನೆ.
ಸೈಕೋ ಮನಸ್ಥಿತಿ ಹೊಂದಿರುವ ಆರೋಪಿ ಗುರುಮೂರ್ತಿ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದಾನೆ. ಇದಕ್ಕೆ ವಿರೋಧ ವ್ಯಕ್ತಪಡಿಸಿದ ಬಾಲಕನನ್ನು ಹತ್ಯೆ ಮಾಡಿದ್ದಾನೆ. ನಂತರ ಪೆಟ್ರೋಲ್ ಸುರಿದ ಸುಟ್ಟು ಹಾಕಿದ್ದಾನೆ. ಆದರೆ, ಕಿಡ್ನಾಪ್ ಮಾಡಿ 5 ಲಕ್ಷ ರೂಪಾಯಿ ಬೇಡಿಕೆ ಇಟ್ಟಿದ್ದ. ಕಗ್ಗಲಿಪುರ ವ್ಯಾಪ್ತಿಯಲ್ಲಿನ ಅರಣ್ಯದಲ್ಲಿ ಅಡಗಿಕುಳಿತಿದ್ದರು. ಪೊಲೀಸರು ಅವರ ಮೇಲೆ ಗುಂಡು ಹಾರಿಸಿ ಬಂಧಿಸಿದ್ದಾರೆ. ಆರೋಪಿ ಗುರುಮೂರ್ತಿ ಈ ಹಿಂದೆ 13 ವರ್ಷದ ಬಾಲಕಿಯ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಬಿಟ್ಟಿದ್ದನಂತೆ. ಹೀಗಾಗಿ 2020ರಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿತ್ತು. ಜಾಮೀನಿನ ಮೇಲೆ ಹೊರ ಬಂದಿದ್ದ. ಈಗ ಘೋರ ಕೃತ್ಯವೆಸಗಿದ್ದಾನೆ.