ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ಜೂನ್ 19 ಗುರುವಾರ ನಂದಿಬೆಟ್ಟದಲ್ಲಿ ನಡೆಯಬೇಕಿದ್ದ ಸಚಿವ ಸಂಪುಟ ಸಭೆ ಮುಂದೂಡಿಕೆಯಾಗಿದೆ. ಚಿಕ್ಕಬಳ್ಳಾಪುರದ ನಂದಿಬೆಟ್ಟದಲ್ಲಿ ಸಚಿವ ಸಂಪುಟ ಸಭೆ ನಡೆಸಲು ನಿರ್ಧರಿಸಲಾಗಿತ್ತು. ಕಾರಣಾಂತರಗಳಿಂದ ಮುಂದೂಡಿಕೆಯಾಗಿದೆ ಎಂದು ಹೇಳಲಾಗುತ್ತಿದೆ. ಹೀಗಾಗಿ ಬಹುತೇಕ ನಾಳೆ ಸಭೆ ವಿಧಾನಸೌಧದಲ್ಲಿಯೇ ನಡೆಯಲಿದೆ ಎಂದು ಹೇಳಲಾಗುತ್ತಿದೆ.