ಪ್ರಜಾಸ್ತ್ರ ಸುದ್ದಿ(ಸಾಂದರ್ಭಿಕ ಚಿತ್ರ)
ನವದೆಹಲಿ(New Delhi): ದೇಶದ ತುಂಬಾ ಇದೀಗ ಜಾತಿಗಣತಿ ಚರ್ಚೆ ಜೋರಾಗಿ ನಡೆದಿದೆ. ಕರ್ನಾಟಕದಲ್ಲಿ ಇದೀಗ ಜಾತಿಗಣತಿ ವರದಿಯ ಬಗ್ಗೆ ತೀವ್ರ ಚರ್ಚೆಗಳು ನಡೆಯುತ್ತಿವೆ. ಜನಗಣತಿ ಜೊತೆಗೆ ಜಾತಿಗಣತಿ ನಡೆಸಲಾಗುವುದು ಎಂದು ಬುಧವಾರ ಕೇಂದ್ರ ಸರ್ಕಾರ ಘೋಷಿಸಿದೆ. ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ರಾಜಕೀಯ ವ್ಯವಹಾರಗಳ ಸಮಿತಿ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದು ಸಚಿವ ಅಶ್ವಿನಿವೈಷ್ಣವ್ ಹೇಳಿದ್ದಾರೆ.
ಈಗಾಗ್ಲೇ ಕೆಲವು ರಾಜ್ಯಗಳು ಜಾತಿಗಣತಿ ನಡೆಸಿವೆ. ಇನ್ನು ಕೆಲವು ರಾಜ್ಯಗಳಲ್ಲಿ ಜಾತಿಗಣತಿ ನಡೆಯುತ್ತಿದೆ. ಆದರೆ, ರಾಜಕೀಯ ಉದ್ದೇಶದಿಂದ ಸಮಾಜದ ಸ್ವಾಸ್ಥ್ಯ ಹಾಳಾಗಬಾರದು. ಹೀಗಾಗಿ ಜನಗಣತಿಯ ಜೊತೆಗೆ ಜಾತಿಗಣತಿ ನಡೆಸಲಾಗುವುದು ಎಂದು ಕೇಂದ್ರ ಸರ್ಕಾರ ಹೇಳಿದೆ. 2010ರಲ್ಲಿ ಜಾತಿಗಣತಿಯನ್ನು ಕಾಂಗ್ರೆಸ್ ಸರ್ಕಾರ ವಿರೋಧಿಸಿತ್ತು. ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಅಂದಿನ ಪ್ರಧಾನಿ ಮನಮೋಹನ್ ಸಿಂಗ್ ಹೇಳಿದ್ದರು. ವಿಪಕ್ಷಗಳು ಇದೊಂದು ಅಸ್ತ್ರವಾಗಿ ಬಳಸಿಕೊಂಡು ಬರುತ್ತಿವೆ ಎಂದು ಸಚಿವ ಅಶ್ವಿನಿವೈಷ್ಣವ್ ಆರೋಪಿಸಿದ್ದಾರೆ.