ಪ್ರಜಾಸ್ತ್ರ ಸುದ್ದಿ
ಚಾಮರಾಜನಗರ(Chamarajanagara): ಕೋವಿಡ್ ಸಂದರ್ಭದಲ್ಲಿ ಇಲ್ಲಿನ ಜಿಲ್ಲಾ ಆಸ್ಪತ್ರೆಯಲ್ಲಿ ಆಕ್ಸಿಜನ್ ಸಮಸ್ಯೆಯಿಂದಾಗಿ 34 ಜನರು ಮೃತಪಟ್ಟಿದ್ದಾರೆ. ಅವರ ಕುಟುಂಬ ಸದಸ್ಯರಿಗೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ನೇಮಕ ಪತ್ರ ವಿತರಿಸಿದರು. ಗುಂಡ್ಲುಪೇಟೆಯ ದೇವರಾಜ ಅರಸು ಕ್ರೀಡಾಂಗಣದಲ್ಲಿ ತಾಲೂಕಿನ 110 ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಚಾಲನೆ ನೀಡಲಾಯಿತು.
ಈ ಸಂದರ್ಭದಲ್ಲಿ 25 ಜನರಿಗೆ ಸರ್ಕಾರಿ ನೌಕರಿಯ ನೇಮಕ ಪತ್ರವನ್ನು ವಿತರಣೆ ಮಾಡಲಾಯಿತು. ಚಾಮರಾಜನಗರ ವೈದ್ಯಕೀಯ ವಿಜ್ಞಾನ ಸಂಸ್ಥೆಗಳ ಬೋಧನಾ ಆಸ್ಪತ್ರೆಯಲ್ಲಿ ವಿವಿಧ ಹುದ್ದೆಗಳನ್ನು ನೀಡಲಾಗಿದೆ. ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ಮೇ 2, 2021ರಂದು ಆಕ್ಸಿಜನ್ ಕೊರತೆಯಿಂದ ಒಂದೇ ದಿನದಲ್ಲಿ 34 ಜನರು ಮೃತಪಟ್ಟಿದ್ದರು. ಭಾರತ್ ಜೋಡೋ ಕಾರ್ಯಕ್ರಮದಲ್ಲಿ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಮೃತಪಟ್ಟ ಕುಟುಂಬಸ್ಥರಿಗೆ ನೌಕರಿ ನೀಡುವ ಭರವಸೆ ನೀಡಿದ್ದರು.




