Ad imageAd image

ಪ್ರಧಾನಿ ಭೇಟಿಯಾದ ಸಿಎಂ: ವಿವಿಧ ವಿಚಾರಗಳ ಮನವಿ ಸಲ್ಲಿಕೆ

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಪ್ರಧಾನಿ ಮೋದಿಯವರನ್ನು ಭೇಟಿಯಾದರು.

Nagesh Talawar
ಪ್ರಧಾನಿ ಭೇಟಿಯಾದ ಸಿಎಂ: ವಿವಿಧ ವಿಚಾರಗಳ ಮನವಿ ಸಲ್ಲಿಕೆ
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ(Photo ANI) ಸಾಂದರ್ಭಿಕ ಚಿತ್ರ

ನವದೆಹಲಿ(New Delhi): ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಪ್ರಧಾನಿ ಮೋದಿಯವರನ್ನು ಭೇಟಿಯಾದರು. ನಬರ್ಡ್ ಸಾಲ ಪ್ರಮಾಣ ಹೆಚ್ಚಳ, ಮೇಕೆದಾಟು, ಕಳಸಾ-ಬಂಡೂರು ಯೋಜನೆಗೆ ಅನುಮತಿ ನೀಡುವುದು, ಭದ್ರಾ ಮೇಲ್ದಂಡೆ ಯೋಜನೆಗೆ ಅನುದಾನ, 16ನೇ ಹಣಕಾಸು ಆಯೋಗದಲ್ಲಿ ರಾಜ್ಯಕ್ಕೆ ನ್ಯಾಯಯುತ ಪಾಲು ಸೇರಿದಂತೆ ವಿವಿಧ ವಿಚಾರಗಳ ಕುರಿತು ಮನವಿ ಸಲ್ಲಿಸಿದ್ದಾರೆ. ಈ ಬಗ್ಗೆ ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

ಇನ್ನು ಕೇರಳದ ಯವನಾಡು ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಗೆದ್ದು ಮೊದಲ ಬಾರಿಗೆ ಲೋಕಸಭೆ ಪ್ರವೇಶ ಮಾಡಿರುವ ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನು ಅಭಿನಂದನೆ ಸಲ್ಲಿಸಿದರು. ಈ ವೇಳೆ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ, ರಾಜ್ಯ ಸಚಿವರಾದ ಕೆ.ಜೆ ಜಾರ್ಜ್, ಭೈರತಿ ಸುರೇಶ್ ಸೇರಿ ಇತರರು ಉಪಸ್ಥಿತರಿದ್ದರು.

WhatsApp Group Join Now
Telegram Group Join Now
Share This Article