ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ಮೈಸೂರು ಅಭಿವೃದ್ಧಿ(MUDA) ಪ್ರಾಧಿಕಾರದಲ್ಲಿ ನಡೆದಿರುವ ಅಕ್ರಮಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ವಿರುದ್ಧ ವಾಗ್ದಾಳಿ ನಡೆಸುತ್ತಿರುವ, ವೈಟ್ನರ್ ಹಚ್ಚಿ ಸತ್ಯ ಮುಚ್ಚಿಟ್ಟಿದ್ದಾರೆ ಎನ್ನುವ ಬಿಜೆಪಿ, ಜೆಡಿಎಸ್ ಆರೋಪಕ್ಕೆ ಸಿಎಂ ತಿರುಗೇಟು ನೀಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹಂಚಿಕೊಂಡು ವೈಟ್ನರ್ ಹಿಂದೆ ಏನಿದೆ ಎಂದು ಹೇಳುವ ಪ್ರಯತ್ನ ಮಾಡಿದ್ದಾರೆ. ಈ ಬಗ್ಗೆ ಮೂರ್ನಾಲ್ಕು ಪ್ಯಾರಾದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಅಂತಿಮವಾಗಿ ಗೆಲುವು ಸತ್ಯದ್ದೆ ಆಗಿರುತ್ತದೆ ಎಂದಿದ್ದಾರೆ. ಸಿಎಂ ಎಕ್ಸ್ ಪೋಸ್ಟ್ ಇಲ್ಲಿದೆ ನೋಡಿ.
ಮುಡಾ ಅಕ್ರಮವಾಗಿ ಸ್ವಾದೀನಪಡಿಸಿಕೊಂಡ ನಮ್ಮ ಕುಟುಂಬದ ಜಮೀನಿಗೆ ಬದಲಿ ಭೂಮಿ ನೀಡುವಂತೆ ನನ್ನ ಪತ್ನಿ ಸಲ್ಲಿಸಿದ್ದ ಅರ್ಜಿಯಲ್ಲಿ ನಾಲ್ಕೈದು ಪದಗಳಿಗೆ ವೈಟ್ನರ್ ಹೆಚ್ಚಿದನ್ನೇ ಮಹಾನ್ ಅಪಾರಾಧವೆಂಬಂತೆ ಗಂಟಲು ಹರಿದುಕೊಂಡ ಬಿಜೆಪಿ – ಜೆಡಿಎಸ್ ನಾಯಕರೇ, ವೈಟ್ನರ್ ಹಿಂದಿರುವ ಅಕ್ಷರಗಳೇನು ಎಂಬುದು ಈ ವೀಡಿಯೋದಲ್ಲಿ ಸ್ಪಷ್ಟವಾಗಿ ಕಾಣುತ್ತಿದೆ,… pic.twitter.com/NMQfgViKNp
— Siddaramaiah (@siddaramaiah) August 26, 2024