ಪ್ರಜಾಸ್ತ್ರ ಸುದ್ದಿ
ಕಲಬುರಗಿ(Kalaburagi): ಮುಖ್ಯಮಂತ್ರಿಗಳ ರಾಜಕೀಯ ಸಲಹೆಗಾರ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವ ಶಾಸಕ ಬಿ.ಆರ್ ಪಾಟೀಲ ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಗ್ಯಾರೆಂಟಿ ಯೋಜನೆಗಳಿಂದ ಶಾಸಕರ ಕ್ಷೇತ್ರಗಳಿಗೆ ಅನುದಾನ ಸಿಗುತ್ತಿಲ್ಲ. ಕೆಲವೊಂದು ಸಮಸ್ಯೆಗಳಿವೆ. ಯಾವತ್ತೋ ರಾಜೀನಾಮೆ ಕೊಡಬೇಕಿತ್ತು. ಅದನ್ನು ನಿನ್ನೆ ಕೊಟ್ಟಿದ್ದೇನೆ. ಇದೇನು ವಿಶೇಷ ಬೆಳವಣಿಗೆ ಅಲ್ಲ ಎಂದಿದ್ದಾರೆ.
ಶಾಸಕರ ಕ್ಷೇತ್ರಗಳಿಗೆ ಅನುದಾನ ಸಿಗುತ್ತಿಲ್ಲ ಎನ್ನುವುದರ ಬಗ್ಗೆ ನನಗೆ ಅಸಮಾಧಾನವಿಲ್ಲ. ಮುಖ್ಯಮಂತ್ರಿಗಳಿಗೆ ಬರೆದ ಪತ್ರದಲ್ಲಿ ಎಲ್ಲವನ್ನೂ ಹೇಳಿದ್ದೇನೆ. ಮಾಧ್ಯಮಗಳ ಮುಂದೆ ಹೇಳಲು ಆಗುವುದಿಲ್ಲ. ಕೊನೆಯ ತನಕ ನಿಮ್ಮ ಸ್ನೇಹಿತನಾಗಿ ಉಳಿಯುತ್ತೇನೆ ಎಂದಿದ್ದಾರೆ. ಬಜೆಟ್ ನಲ್ಲಿ ಆಳಂದ ಕ್ಷೇತ್ರಕ್ಕೆ ಹೆಚ್ಚಿನ ಅನುದಾನ ಸಿಕ್ಕಿಲ್ಲ. ಇದರಿಂದ ಅಸಮಾಧನಗೊಂಡಿದ್ದು, ಮುಂದಿನ ಬಜೆಟ್ ನಲ್ಲಿ ಅನುದಾನ ಪಡೆಯುವ ಸಲುವಾಗಿ ರಾಜೀನಾಮೆ ನೀಡಿದ್ದಾರೆ ಎನ್ನುವ ಮಾತುಗಳು ಕೇಳಿ ಬರುತ್ತಿವೆ.