ಪ್ರಜಾಸ್ತ್ರ ಸುದ್ದಿ
ಕೊಪ್ಪಳ(Koppala): ಇಲ್ಲಿನ ತಾಯಿ ಮತ್ತು ಮಕ್ಕಳ ಸರ್ಕಾರಿ ಆಸ್ಪತ್ರೆಯಲ್ಲಿ ಸೆಪ್ಟೆಂಬರ್ 26ರಂದು ಮಹಿಳೆಯೊಬ್ಬರಿಗೆ(Delivery) ಹೆರಿಗೆಯಾಗಿದೆ. ಆಗ ಆಸ್ಪತ್ರೆ ಸಿಬ್ಬಂದಿ ಹೆಣ್ಣು(Baby Girl) ಮಗು ಎಂದು ಹೇಳಿದ್ದಾರೆ. ಅವಧಿ ಪೂರ್ವ ಜನನವಾಗಿದ್ದ ಮಗು ಮೃತಪಟ್ಟಿದೆ ಎಂದು ಒಂದು ವಾರದ ಬಳಿಕ ಕುಟುಂಬಸ್ಥರಿಗೆ ನೀಡಿದ್ದಾರೆ. ಕೂಸಿನ ಅಂತ್ಯಸಂಸ್ಕಾರ ನಡೆಸುವ ವೇಳೆ ಕುಟುಂಬಸ್ಥರಿಗೆ ಶಾಕ್ ಆಗಿದೆ. ಯಾಕಂದರೆ ಆಸ್ಪತ್ರೆ ಸಿಬ್ಬಂದಿ ಕೊಟ್ಟಿದ್ದು ಗಂಡು ಮಗುವಿನ(Baby Boy ಶವ. ಆಗ ಆಸ್ಪತ್ರೆಗೆ ತೆರಳಿ ತರಾಟೆಗೆ ತೆಗೆದುಕೊಳ್ಳಲಾಗಿದೆ.
ಹಗರಿಬೊಮ್ಮನಹಳ್ಳಿಯ ಗೌರಿ ಕನಕಗೊಲ್ಲರ ಅನ್ನೋ ಮಹಿಳೆಯ ಕುಟುಂಬಸ್ಥರು ಜಗಳ ತೆಗೆದಾಗ ಆಸ್ಪತ್ರೆಯವರು ಯಾವುದೂ ಅವಾಂತರದಲ್ಲಿ ಹೆಣ್ಣು ಮಗು ಎಂದಿದ್ದೇವೆ ಎಂದು ಸಮಜಾಯಿಷಿ ನೀಡಿದ್ದಾರೆ. ಇದು ಜಿಲ್ಲಾ ಶಸ್ತ್ರಚಿಕಿತ್ಸ ಡಾ.ಕೃಷ್ಣ ಓಂಕಾರ ಅವರ ಗಮನಕ್ಕೂ ಬಂದಿದೆ. ಈ ಬಗ್ಗೆ ತನಿಖೆಗೆ ಸಮಿತಿ ರಚನೆ ಮಾಡಿದ್ದಾರೆ. ಹೆರಿಗೆ ಸಂದರ್ಭದಲ್ಲಿ ಹಾಜರಿದ್ದ ವೈದ್ಯರು, ಸಿಬ್ಬಂದಿ ವಿಚಾರಣೆಗೆ ಬರಲು ಸೂಚಿಸಿದ್ದಾರೆ. ಪೋಷಕರು ಹಾಗೂ ಮಗುವಿನ ಡಿಎನ್ ಎ ಪರೀಕ್ಷೆ ನಡೆಸಲು ಸೂಚಿಸಿದ್ದಾರೆ. ಸಮಿತಿಯ ವರದಿ ಬಂದ ಬಳಿಕ ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಹೇಳಿದ್ದಾರೆ.