ಪ್ರಜಾಸ್ತ್ರ ಸುದ್ದಿ
ಜಮ್ಮು(Jammu): ಕಣಿವೆ ನಾಡಿನ ಕಥುವಾ ಜಿಲ್ಲೆಯ ರಾಜ್ ಬಾಗ್ ಪ್ರದೇಶದ ಘಾಟಿ ಗ್ರಾಮದಲ್ಲಿ ಮೇಘಸ್ಫೋಟ ಸಂಭವಿಸಿದೆ. ಇದರಿಂದಾಗಿ 7 ಜನರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಹಲವು ಜನರು ಗಾಯಗೊಂಡಿದ್ದಾರೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ. ಗ್ರಾಮದ ಸಂಪರ್ಕ ಕಡಿತಗೊಂಡಿದ್ದು, ಹಲವರು ನಾಪತ್ತೆಯಾಗಿದ್ದಾರೆ.
ಭಾರೀ ಮಳೆಯಿಂದ ಭೂಕುಸಿತ ಸಹ ಉಂಟಾಗಿದೆ. ಎಸ್ ಡಿಆರ್ ಎಫ್, ಎನ್ ಡಿಆರ್ ಎಫ್ ತಂಡಗಳು ರಕ್ಷಣಾ ಕಾರ್ಯಾಚರಣೆ ನಡೆಸಿವೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗುತ್ತಿದೆ. ಅಪಾರ ಪ್ರಮಾಣದ ಮಳೆಯಿಂದ ಹಳ್ಳ, ಕೊಳ್ಳಗಳು ತುಂಬಿ ಹರಿಯುತ್ತಿವೆ. ಉಜ್ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಸಾರ್ವಜನಿಕರು ಮುಳಗಡೆ ಪ್ರದೇಶದಿಂದ ದೂರ ಇರಲು ಜಿಲ್ಲಾಡಳಿತ ಸೂಚಿಸಿದೆ.