ಪ್ರಜಾಸ್ತ್ರ ಸುದ್ದಿ
ಪಾಟ್ನಾ(Patna): ಮಿನಿ ವ್ಯಾನ್ ಹಾಗೂ ಟ್ರಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮಹಿಳೆಯೊಬ್ಬರು ಸೇರಿದಂತೆ 8 ಜನರು ಮೃತಪಟ್ಟಿದ್ದಾರೆ. ಪಟ್ನಾ-ನಳಂದ ಗಡಿ ಹತ್ತಿರದ ಶಹಜಾನಪುರದಲ್ಲಿ ಶನಿವಾರ ಮುಂಜಾನೆ ನಡೆದಿದೆ. ಗಾಯಾಳುಗಳನ್ನು ಪಟ್ನಾ ವೈದ್ಯಕೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆ ಬಗ್ಗೆ ತಿಳಿದ ತಕ್ಷಣ ಪೊಲೀಸರು, ಸಂಚಾರಿ ಅಧಿಕಾರಿಗಳು, ಆಂಬ್ಯುಲೆನ್ಸ್ ಗಳು ಅಪಘಾತದ ಸ್ಥಳಕ್ಕೆ ತೆರೆದಿದ್ದು, 8 ಜನರು ಮೃತಪಟ್ಟಿದ್ದಾರೆ. ಐದು ಜನ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವ ಸಂಬಂಧ ಸಿವಿಲ್ ಸರ್ಜನ್ ಆಸ್ಪತ್ರೆಯ ಸೂಪರಿಂಟೆಂಡೆಂಟ್ ಅವರೊಂದಿಗೆ ಸಂಪರ್ಕದಲ್ಲಿದ್ದಾರೆ.