ಪ್ರಜಾಸ್ತ್ರ ಸುದ್ದಿ
ಬೆಳಗಾವಿ(Belagavi): ಎರಡು ಕಾರುಗಳ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಮೂವರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಚಿಕ್ಕಬಾಗೇವಾಡಿ ಹತ್ತಿರ ಸೋಮವಾರ ಸಂಜೆ ನಡೆದಿದೆ. ಮಾಜಿ ಶಾಸಕ ಆರ್.ವಿ ಪಾಟೀಲ ಪುತ್ರ ಸೇರಿ ಮೂವರು ಗಾಯಗೊಂಡಿದ್ದಾರೆ. ಅಲ್ಟೋ ಕಾರಿನಲ್ಲಿದ್ದ ಅಯುಮ್, ಇವರ ಪತ್ನಿ ಹಾಗೂ ಮಗು ಮೃತಪಟ್ಟಿದ್ದಾರೆ. ಮತ್ತೊಂದು ಮಗು ಗಂಭೀರವಾಗಿ ಗಾಯಗೊಂಡಿದೆ.
ಬೈಲಹೊಂಗಲಕ್ಕೆ ಹೊರಟಿದ್ದ ಕೀಯಾ ಕಾರು ಓವರ್ ಟೇಕ್ ಮಾಡಲು ಹೋಗಿದ್ದಾಗ ಎದುರಿಗೆ ಬಂದ ಅಲ್ಟೋ ಕಾರಿಗೆ ಡಿಕ್ಕಿ ಹೊಡೆದಿದೆ. ಇದರ ಪರಿಣಾಮ ಮೂವರ ಜೀವ ಹೋಗಿದೆ. ಗಾಯಾಳುಗಳನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಬೈಲಹೊಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.