ಪ್ರಜಾಸ್ತ್ರ ಸುದ್ದಿ
ಮಂಗಳೂರು(Mangaloru): ಗುಂಪು ಹಲ್ಲೆಯಲ್ಲಿ ಯುವಕನ ಸಾವು ಪ್ರಕರಣ ಸಂಬಂಧ ಮೂವರು ಪೊಲೀಸ್ ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ. ಮಂಗಳೂರು ಗ್ರಾಮಾಂತರ ಠಾಣೆಯ ಪಿಎಸ್ಐ ಶಿವಕುಮಾರ್ ಸೇರಿದಂತೆ ಮೂವರನ್ನು ಸಸ್ಪೆಂಡ್ ಮಾಡಲಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ 23 ಮಂದಿಯನ್ನು ಬಂಧಿಸಲಾಗಿದೆ.
ಕಳೆದ ಭಾನುವಾರ ಕುಡುಪು ಎಂಬಲ್ಲಿ ಯುವಕನೊಬ್ಬನ ಮೇಲೆ ಹಲ್ಲೆ ಮಾಡಲಾಗಿದೆ. ಭಾರತೀಯ ನ್ಯಾಯ ಸಂಹಿತಾ ಸೆಕ್ಷನ್ ಅಡಿಯಲ್ಲಿ 23 ಮಂದಿಯನ್ನು ಬಂಧಿಸಲಾಗಿದೆ. ಮೃತ ಯುವಕನನ್ನು ಕೇರಳದ ವಯನಾಡ್ ಜಿಲ್ಲೆಯ ಸುಲ್ತಾನ್ ಬತ್ತೇರಿ ತಾಲೂಕಿನ ಪುಲ್ಪಲ್ಲಿ ಗ್ರಾಮದ ನಿವಾಸಿ ಅಶ್ರಫ್ ಎಂದು ಗುರುತಿಸಲಾಗಿದೆ.