ಪ್ರಜಾಸ್ತ್ರ ಸುದ್ದಿ
ಬೆಳಗಾವಿ(Belagavi): ಶಾಲೆಯಲ್ಲಿ ಪಾಠ ಮಾಡುತ್ತಿರುವಾಗಲೇ ಶಿಕ್ಷಕರೊಬ್ಬರಿಗೆ ಹೃದಯಾಘಾತವಾಗಿ ಮೃತಪಟ್ಟ ಘಟನೆ ಜಿಲ್ಲೆಯ ಅಥಣಿ ತಾಲೂಕಿನ ಐಗಳಿ ಗ್ರಾಮದಲ್ಲಿ ನಡೆದಿದೆ. ಶಿಕ್ಷಕ ಭೈರಪ್ಪ ಆರ್.ಸಾತಗೊಂಡನವರ(55) ಎಂದು ತಿಳಿದು ಬಂದಿದೆ. ಐಗಳಿ ಗ್ರಾಮದ ತೆಲಸಂಗ ವಸತಿ ತೋಟದ ಸರ್ಕಾರಿ ಕನ್ನಡ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಎಂದಿನಂತೆ ಇಂದು ಸಹ ಪಾಠ ಮಾಡುತ್ತಿದ್ದರು. ಆದರೆ, ಈ ವೇಳೆ ಹೃದಾಘಾತ ಸಂಭವಿಸಿ ಕೊನೆಯುಸಿರೆಳೆದಿದ್ದಾರೆ. ಮೃತರು ಇಬ್ಬರು ಪುತ್ರಿಯರನ್ನು, ಬಂಧು ಮಿತ್ರರನ್ನು ಅಗಲಿದ್ದಾರೆ.