ಪ್ರಜಾಸ್ತ್ರ ಸುದ್ದಿ
ಕಲಬುರಗಿ(Kalaburagi): ವ್ಯಕ್ತಿಯೊಬ್ಬನ ಮೇಲೆ ಲಾರಿ ಹರಿದು ಮೃತಪಟ್ಟಿರುವ ಘಟನೆ ಜಿಲ್ಲೆಯ ಚಿತ್ತಾಪುರ ಪಟ್ಟಣದ ತಾಲೂಕು ಸಾರ್ವಜನಿಕ ಆಸ್ಪತ್ರೆ ಎದುರು ನಡೆದಿದೆ. ಮೊಗಲಾ ಗ್ರಾಮದ ಚಂದ್ರಪ್ಪ(45) ಮೃತ ದುರ್ದೈವಿ. ಇಲ್ಲಿನ ಸಾರ್ವಜನಿಕ ಆಸ್ಪತ್ರೆಗೆ ಚಿಕಿತ್ಸೆಗೆಂದು ಬರುತ್ತಿದ್ದಾಗ ಲಾರಿ ಇತನ ಮೇಲೆ ಹರಿದಿದೆ. ಇದರ ಪರಿಣಾಮ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ.
ಲಾರಿ ಚಾಲಕನ ಅತಿಯಾದ ವೇಗ ಅಪಘಾತಕ್ಕೆ ಕಾರಣವೆಂದು ಹೇಳಲಾಗುತ್ತಿದೆ. ಅಪಘಾತದ ಸುದ್ದಿ ತಿಳಿದು ಸ್ಥಳಕ್ಕೆ ಪಿಎಸ್ಐ ಶ್ರೀಶೈಲ ಅಂಬಾಟಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಚಿತ್ತಾಪುರ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದ್ದು, ಲಾರಿ ಚಾಲಕ ಯಾರು? ಅಪಘಾತ ಸಂಭವಿಸಿತು ಅನ್ನೋದರ ತನಿಖೆ ನಡೆಸಲಾಗುತ್ತಿದೆ.