ಪ್ರಜಾಸ್ತ್ರ ಸುದ್ದಿ
ವಿಜಯಪುರ(Vijayapura): ನಗರದಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ಇದರಿಂದಾಗಿ ಪೋಷಕರು ಆತಂಕಕ್ಕೆ ಒಳಗಾಗಿದ್ದಾರೆ. ಯಾಕಂದರೆ, ವಾಚ್ ವಿಚಾರವಾಗಿ ಶಾಲೆಯಲ್ಲಿ ವಿದ್ಯಾರ್ಥಿಗಳ ನಡುವೆ ಗಲಾಟೆಯಾಗಿ ಓರ್ವ ವಿದ್ಯಾರ್ಥಿ ಮೃತಪಟ್ಟ ಘಟನೆ ನಡೆದಿದೆ. ಬಿಹಾರ್ ಮೂಲದ ಸುನೀಲ ಹಾಗೂ ಶ್ರುತಿ ದಂಪಿಯ ಪುತ್ರ ಅನ್ಸ್ ಮೃತ ವಿದ್ಯಾರ್ಥಿ ಎಂದು ತಿಳಿದು ಬಂದಿದೆ. ಮಗನನ್ನು ಕಳೆದುಕೊಂಡ ಪೋಷಕರು ನಗರದ ಶ್ರೀ ಸತ್ಯಸಾಯಿ ಬಾಬಾ ಶಿಕ್ಷಣ ಸಂಸ್ಥೆಯ ಪೂರ್ವ ಹಾಗೂ ಪ್ರೌಢಶಾಲೆಯ ಮುಂದೆ ಪ್ರತಿಭಟನೆ ನಡೆಸಿದರು.
ಕಳೆದ ಐದು ದಿನಗಳ ಹಿಂದೆ ಈ ಘಟನೆ ನಡೆದಿದೆ. ವಿದ್ಯಾರ್ಥಿ ಅನ್ಸ್ ಹಾಕಿಕೊಂಡು ಬಂದಿದ್ದ ವಾಚ್ ನೋಡಿದ 9ನೇ ತರಗತಿಯ ಮೂವರು ವಿದ್ಯಾರ್ಥಿಗಳು ಗಲಾಟೆ ಮಾಡಿದ್ದಾರಂತೆ. ಅಲ್ಲದೆ ಆತನ ಮೇಲೆ ಹಲ್ಲೆ ಸಹ ಮಾಡಿದ್ದಾರೆ. ಇದನ್ನು ಶಾಲೆಯವರಿಗೆ ಹೇಳಲು ಬಂದು ಪೋಷಕರನ್ನೇ ಬೆದರಿಸಿ ವಾಪಸ್ ಕಳಿಸಿದ್ದಾರಂತೆ. ಆದರೆ, ಇದೀಗ ನೋಡಿದರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಾಲಕ ಮೃತಪಟ್ಟಿದ್ದಾನೆ. ಘಟನೆ ಬಳಿಕ ಶಾಲಾ ಆಡಳಿತ ಮಂಡಳಿ, ಮುಖ್ಯಸ್ಥರು ಶಾಲೆಗೆ ಬೀಗ ಹಾಕಿಕೊಂಡು ಹೋಗಿದ್ದಾರೆ. ಗೋಲ್ ಗುಂಬಜ್ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದು, ಯಾವ ಕಾರಣದಿಂದ ವಿದ್ಯಾರ್ಥಿ ಮೃತಪಟ್ಟಿದ್ದಾನೆ ಎಂದು ತಿಳಿದು ಬರಬೇಕಿದೆ.