ಪ್ರಜಾಸ್ತ್ರ ಸುದ್ದಿ
ಕಲಬುರಗಿ(Kalaburagi): ಬೆಳ್ಳಂಬೆಳಗ್ಗೆ ಭೀಕರ ಅಪಘಾತ ಸಂಭವಿಸಿ ಐವರು ಮೃತಪಟ್ಟ ದಾರುಣ ಘಟನೆ ಜಿಲ್ಲೆಯ ಜೇವರ್ಗಿ ತಾಲೂಕಿನ ನೇಲೋಗಿ ಕ್ರಾಸ್ ಹತ್ತಿರ ನಡೆದಿದೆ. ನಿಂತಿದ್ದ ಲಾರಿಗೆ ಮ್ಯಾಕ್ಸಿ ಕ್ಯಾಬ್ ಡಿಕ್ಕಿ ಹೊಡೆದು ಈ ದುರಂತ ನಡೆದಿದೆ. ಮ್ಯಾಕ್ಸಿ ಕ್ಯಾಬ್ ನಲ್ಲಿ 31 ಜನರು ಪ್ರಯಾಣಿಸುತ್ತಿದ್ದರು ಎಂದು ತಿಳಿದು ಬಂದಿದೆ. ಹಲವರು ಗಾಯಗೊಂಡಿದ್ದಾರೆ.
ಚಾಲಕನ ನಿಯಂತ್ರಣ ತಪ್ಪಿ ಮ್ಯಾಕ್ಸಿ ಕ್ಯಾಬ್ ಲಾರಿಗೆ ಡಿಕ್ಕಿ ಹೊಡೆದಿದೆ. ಮೃತಪಟ್ಟ ಐವರು ಬಾಗಲಕೋಟೆ ಮೂಲದವರಾಗಿದ್ದಾರೆ. ಪ್ರಿಯಾಂಕಾ, ವಾಜೀದ್, ಮೆಹಬೂಬಿ ಸೇರಿದಂತೆ ಐವರು ಮೃತಪಟ್ಟಿದ್ದು, ಇನ್ನಿಬ್ಬರ ಹೆಸರು ತಿಳಿದು ಬರಬೇಕಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಘಟನೆ ಕುರಿತು ಇನ್ನು ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ.