ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ಕಾರೊಂದು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸ್ಥಳದಲ್ಲಿಯೇ ಮೃತಪಟ್ಟು, ಇಬ್ಬರು ಮಕ್ಕಳು ಗಾಯಗೊಂಡಿರುವ ಘಟನೆ ನೆಲಮಂಗಲ ತಾಲೂಕಿನ ದಾಬಸ್ ಪೇಟೆ ಬಳಿ ನಡೆದಿದೆ. ಬೆಂಗಳೂರಿನಿಂದ ತುಮಕೂರು ಕಡೆ ಹೊರಟಿದ್ದ ಕಾರು ಭೀಕರ ಅಪಘಾತವಾಗಿದೆ.
ಬೆಂಗಳೂರಿನ ಮಲ್ಲೇಶ್ವರ ನಿವಾಸಿಗಳಾದ ಗೋಪಾಲ(60), ಶಶಿಕಲಾ(55), ದೀಪಿಕಾ(35) ಹಾಗೂ ಕಾರು ಚಾಲಕ ಗೋಪಾಲ(45) ಮೃತ ದುರ್ದೈವಿಗಳು. ಇಬ್ಬರು ಮಕ್ಕಳು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಂಗಳೂರು ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಅಪಘಾತ ನಡೆದಿದೆ.