ಪ್ರಜಾಸ್ತ್ರ ಸುದ್ದಿ
ನವದೆಹಲಿ(New Delhi): ಉತ್ತರ ಪ್ರದೇಶದ ಅಯೋಧ್ಯೆಯಲ್ಲಿರುವ(Ayodhya) ರಾಮ ಮಂದಿರದ ಮುಖ್ಯ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ಅವರು ಬುಧವಾರ ನಿಧನರಾಗಿದ್ದಾರೆ. ಈ ಕುರಿತು ಸುದ್ದಿಸಂಸ್ಥೆಯೊಂದರಲ್ಲಿ ವರದಿಯಾಗಿದೆ. ಸಂಜಯ್ ಗಾಂಧಿ ವೈದ್ಯಕೀಯ ವಿಜ್ಞಾನ ಸ್ನಾತಕೋತ್ತರ ಸಂಸ್ಥೆಯಲ್ಲಿ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದು ಬಂದಿದೆ. 85 ವರ್ಷದ ಸತ್ಯೇಂದ್ರ ದಾಸ್ ಅವರು ಪಾರ್ಶ್ವವಾಯುವಿನಿಂದ ಬಳಲುತ್ತಿದ್ದರಂತೆ.
ಇವರ ನಿಧನಕ್ಕೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಂತಾಪ ಸೂಚಿಸಿದ್ದಾರೆ. ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಶ್ರೀರಾಮನ ಪರಮ ಭಕ್ತರಾಗಿದ್ದ ಸತ್ಯೇಂದ್ರ ಕುಮಾರ್ ದಾಸ್ ಜಿ ಮಹಾರಾಜ್(Acharya Satyendra Das Acharya) ಅವರ ನಿಧನ ಆಧ್ಯಾತ್ಮಿಕ ಜಗತ್ತಿಗೆ ತುಂಬಲಾರದ ನಷ್ಟವೆಂದಿದ್ದಾರೆ.