ಪ್ರಜಾಸ್ತ್ರ ಸುದ್ದಿ
ಉಡುಪಿ(Udupi): ಸಮುದ್ರದಲ್ಲಿ ನಾಡದೋಣಿ ಮಗುಚಿ ಮೂವರು ಮೀನುಗಾರರು ಮೃತಪಟ್ಟ ಘಟನೆ ಜಿಲ್ಲೆಯ ಬೈಂದೂರು ತಾಲೂಕಿನ ಗಂಗೊಳ್ಳಿಯಲ್ಲಿ ನಡೆದಿದೆ. ಸುರೇಶ ಖಾರ್ವಿ, ರೋಹಿತ ಖಾರ್ವಿ ಹಾಗೂ ಜಗ್ಗು ಅನ್ನೋ ಮೂವರು ಮೀನುಗಾರರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಇನ್ನುಳಿದವರ ಶೋಧ ಕಾರ್ಯ ನಡೆದಿದೆ. ಒಬ್ಬರನ್ನು ರಕ್ಷಿಸಲು ಮತ್ತೊಬ್ಬರು ಹೋಗಿ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.