ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ನಿರ್ಮಾಣ ಹಂತದ ಮೂರು ಅಂತಸ್ತಿನ ಕಟ್ಟಡದಲ್ಲಿ ಆಕಸ್ಮಿಕ ಬೆಂಕಿ ಅನಾಹುತ ಸಂಭವಿಸಿದೆ. ಇದರಿಂದಾಗಿ ಇಬ್ಬರು ಕಾರ್ಮಿಕರು ಸಜೀವ ದಹನವಾದ ದುರಂತ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ. ಮಾಗಡಿ ರಸ್ತೆಯಲ್ಲಿರುವ ಸೀಗೇಹಳ್ಳಿಯಲ್ಲಿ 3 ಅಂತಸ್ತಿನ ಮಹಡಿ ನಿರ್ಮಾಣ ಹಂತದಲ್ಲಿತ್ತು. ಇದರಲ್ಲಿ ಬೆಂಕಿ ಅನಾಹುತ ಸಂಭವಿಸಿದೆ. ಬಿಹಾರ ಮೂಲದ ಇಬ್ಬರು ಮೃತಪಟ್ಟಿದ್ದಾರೆ. ಇಬ್ಬರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಶಿವಾನಿ ಗ್ರೀನ್ಸ್ ಲೇಔಟ್ ನಲ್ಲಿ ಸತೀಶ್ ಎಂಬುವರು ಈ ಕಟ್ಟಡ ನಿರ್ಮಿಸುತ್ತಿದ್ದರು. ಇಲ್ಲಿ ಆಕಸ್ಮಿಕವಾಗಿ ಬೆಂಕಿ ಅವಗಡ ಸಂಭವಿಸಿದೆ. ಇದಕ್ಕೆ ಕಾರಣ ಏನು ಎಂಬುವುದು ತನಿಖೆಯಿಂದ ತಿಳಿಯಲಿದೆ. ಮಾದನಾಯಕನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.