ಪ್ರಜಾಸ್ತ್ರ ಸುದ್ದಿ
ಬೆಳಗಾವಿ(Belagavi): ಗೂಡ್ಸ್ ವಾಹನ ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿ ಇಬ್ಬರು ಪ್ರಾಣ ಕಳೆದುಕೊಂಡಿರುವ ಘಟನೆ ಸೋಮವಾರ ನಡೆದಿದೆ. ಜಿಲ್ಲೆಯ ರಾಮದುರ್ಗ ತಾಲೂಕಿನ ಮುಳ್ಳೂರು ಘಾಟ ಹತ್ತಿರದಲ್ಲಿ ಗೂಡ್ಸ್ ವಾಹನ ಚಾಲಕನ ನಿಯಂತ್ರಣ ತಪ್ಪಿ ಬೈಕ್ ಗೆ ಡಿಕ್ಕಿ ಹೊಡೆದಿದೆ. ಈ ವೇಳೆ ಬೈಕ್ ಸವಾರ ಹಾಗೂ ಗೂಡ್ಸ್ ವಾಹನ ಚಾಲಕ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ರಾಮದುರ್ಗ ಪಟ್ಟಣದ ಶಿವಲಿಂಗ ದೇವಸ್ಥಾನದ ಮುಖ್ಯ ಅರ್ಚಕ ವಿಜಯಕುಮಾರ್ ಘೋಡಬೋಲೆ(55) ಮತ್ತು ಕಲಬುರಗಿ ಜಿಲ್ಲೆ ಮೂಲದ ಗೂಡ್ಸ್ ವಾಹನ ಚಾಲಕ ಅನಿಲ್ ರಮೇಶ ಬಿರಾದಾರ(23) ಮೃತರು ಎಂದು ತಿಳಿದು ಬಂದಿದೆ. ಅಪಘಾತದಲ್ಲಿ ನಾಲ್ವರು ಗಾಯಗೊಂಡಿದ್ದಾರೆ. ರಾಮದುರ್ಗ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.