ಪ್ರಜಾಸ್ತ್ರ ಸುದ್ದಿ
ರಾಮನಗರ(Ramanagara): ಬೈಕ್ ಗೆ ಸಾರಿಗೆ ಬಸ್ ವೊಂದು ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ಕಗ್ಗಲಿಪುರ ಪೊಲೀಸ್ ಠಾಣೆ ಹತ್ತಿರ ನಡೆದಿದೆ. ಎಲೆಕ್ಟ್ರಾನಿಕ್ ಸಿಟಿ ಸಂಚಾರ ಪೊಲೀಸ್ ಠಾಣೆ ಪಿಎಸ್ಐ ನಾಗರಾಜ್ ಹಾಗೂ ಇನ್ನೊಬ್ಬರು ಮೃತಪಟ್ಟಿದ್ದಾರೆ. ಕನಕಪುರದಿಂದ ಬೆಂಗಳೂರು ಕಡೆ ಹೊರಟಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೆ ಏರಿ ಪಕ್ಕದ ರಸ್ತೆಗೆ ನುಗ್ಗಿದೆ. ಆ ಕಡೆಯಿಂದ ಬರುತ್ತಿದ್ದ ಬೈಕ್ ಗೆ ಡಿಕ್ಕಿ ಹೊಡೆದಿದೆ. ಆಗ ಪಿಎಸ್ಐ ನಾಗರಾಜ್ ಹಾಗೂ ಮತ್ತೊಬ್ಬರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಅಲ್ಲದೆ ಬಸ್ ಪಕ್ಕದ ಹಳ್ಳಕ್ಕೆ ಹೋಗಿ ಬಿದ್ದಿದೆ. ಅಪಘಾತದಲ್ಲಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮೂವರನ್ನು ದಯಾನಂದ ಸಾಗರ ಆಸ್ಪತ್ರೆಗೆ, ಒಬ್ಬರನ್ನು ನಿಮಾನ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.