ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ಮರಕ್ಕೆ ಕಾರು ಡಿಕ್ಕಿಯಾಗಿ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟ ಘಟನೆ ಸೋಮವಾರ ತಡರಾತ್ರಿ ಬನ್ನೇರುಘಟ್ಟ ವ್ಯಾಪ್ತಿಯ ರಾಗಿಹಳ್ಳಿ ಅರಣ್ಯ ಪ್ರದೇಶದಲ್ಲಿ ನಡೆದಿದೆ. ಕೇರಳ ಮೂಲದ ಅರ್ಶು(23) ಹಾಗೂ ಸಹಹುಕ್(28) ಮೃತ ದುರ್ದೈವಿಗಳು. ಸಾಹಿಲ್ ಎನ್ನುವ ಇನ್ನೋರ್ವ ವಿದ್ಯಾರ್ಥಿ ಗಾಯಗೊಂಡಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಇವರು ಗೊಟ್ಟಿಗೆರೆಯ ಟಿ ಜಾನ್ ಕಾಲೇಜಿನಲ್ಲಿ ಓದುತ್ತಿದ್ದು, ಕುಡಿದು ಕಾರು ಚಲಾಯಿಸುತ್ತಿದ್ದರು ಎಂದು ಹೇಳಲಾಗುತ್ತಿದೆ. ಬನ್ನೇರುಘಟ್ಟ ಠಾಣೆ ಪೊಲೀಸರಿಂದ ತನಿಖೆ ನಡೆದಿದೆ.