ಪ್ರಜಾಸ್ತ್ರ ಸುದ್ದಿ
ವಿಜಯಪುರ(Vijayapura): ಲಾರಿಯೊಂದು ಅಡ್ಡಾದಿಡ್ಡಿ ಚಲಾಯಿಸಿ ಸರಣಿ ಅಪಘಾತ ಸಂಭವಿಸಿದೆ. ಇದರ ಪರಿಣಾಮ ಬಿಎಸ್ಎಫ್ ಯೋಧ ಸೇರಿ ಇಬ್ಬರು ಮೃತಪಟ್ಟ ಘಟನೆ ನಿಡಗುಂದಿ ಪಟ್ಟಣದಲ್ಲಿ ನಡೆದಿದೆ. ಮುದ್ದೇಬಿಹಾಳ ತಾಲೂಕಿನ ಕಾಳಗಿ ತಾಂಡಾದ ಬಿಎಸ್ಎಫ್ ಯೋಧ ಮೌನೇಶ ರಾಠೋಡ(35) ಮೃತ ದುರ್ದೈವಿ. ಇನ್ನೊಬ್ಬರ ಗುರುತು ಪತ್ತೆಯಾಗಬೇಕಿದೆ.
ಬಾಗಲಕೋಟೆ ಜಿಲ್ಲೆಯ ಆಲೂರು ತಾಂಡಾದಲ್ಲಿರುವ ಪತ್ನಿ ಮನೆಗೆ ಬೈಕ್ ನಲ್ಲಿ ಹೊರಟಿದ್ದರು. ಇನ್ನು ಗೋವಾಕ್ಕೆ ಹೊರಟಿದ್ದ ಸರ್ಕಾರಿ ಬಸ್ಸಿಗೂ ಡಿಕ್ಕಿ ಹೊಡೆದಿದೆ. ಅಲ್ಲದೆ ಆಂಬ್ಯುಲೆನ್ಸ್ ಗೂ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾನೆ. ನಿಡಗುಂದಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ಕೊಟ್ಟಿದ್ದಾರೆ. ಲಾರಿ ಚಾಲಕ ಅತಿ ವೇಗವಾಗಿ ಹಾಗೂ ಅಜಾಗುರಕತೆಯಿಂದ ಚಾಲನೆ ಮಾಡಿದ್ದೆ ಇಷ್ಟೊಂದು ಅನಾಹುತಕ್ಕೆ ಕಾರಣವೆಂದು ಹೇಳಲಾಗುತ್ತಿದೆ.