Ad imageAd image

ವರಿಷ್ಠರ ನಿರ್ಧಾರ ಸಂಭ್ರಮಿಸಬಾರದು: ವಿಜಯೇಂದ್ರ

Nagesh Talawar
ವರಿಷ್ಠರ ನಿರ್ಧಾರ ಸಂಭ್ರಮಿಸಬಾರದು: ವಿಜಯೇಂದ್ರ
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ಬೆಂಗಳೂರು(Bengaloru): ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಅವರನ್ನು ಬಿಜೆಪಿ ಪಕ್ಷದಿಂದ 6 ವರ್ಷಗಳ ಉಚ್ಛಾಟನೆ ಮಾಡಲಾಗಿದೆ. ಹೀಗಾಗಿ ಅವರ ವಿರೋಧಿ ಬಣದವರು ವಿಜಯಪುರದ ವಿವಿಧ ಕಡೆ ಬುಧವಾರ ಸಂಜೆಯಿಂದಲೇ ಪಟಾಕಿ ಸಿಡಿಸಿ ಸಂಭ್ರಮಿಸಿದ್ದಾರೆ. ಇದು ಸಿಕ್ಕಾಪಟ್ಟೆ ಚರ್ಚೆಯಾಗಿದೆ. ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ, ಭಾರತೀಯ ಜನತಾ ಪಾರ್ಟಿ ಉದಾತ್ತ ಉದ್ದೇಶ ಹಾಗೂ ಗುರಿಯನ್ನಿಟ್ಟುಕೊಂಡು ಯೋಜಿತವಾಗಿ ಬೆಳೆದು ಕೋಟ್ಯಾಂತರ ಸಮರ್ಪಣಾ ಕಾರ್ಯಕರ್ತರನ್ನು ದೇಶ ಕಟ್ಟುವ ಬದ್ಧತೆಗಾಗಿ ಸಜ್ಜುಗೊಳಿಸಿದ ಪಕ್ಷ. ಅಶಿಸ್ತಿನ ವಿರುದ್ಧ ಪಕ್ಷದ ವರಿಷ್ಠರು ಕೈಗೊಂಡಿರುವ ನಿರ್ಧಾರವನ್ನು ಸಂಭ್ರಮಿಸಬಾರದೆಂದು ವಿನಂತಿಸುತ್ತೇನೆ ಎಂದಿದ್ದಾರೆ.

ಸಂಸ್ಕಾರವಂತ ಮತ್ತು ಶಿಸ್ತುಬದ್ಧ ಸಂಘಟನೆಯ ವ್ಯವಸ್ಥೆಯಲ್ಲಿರುವ ನಾವು ಪಕ್ಷದ ವರಿಷ್ಠರು ಕೈಗೊಂಡ ನಿರ್ಧಾರವನ್ನು ಗೌರವಿಸಿ ಮುಂಬರುವ ದಿನಗಳಲ್ಲಿ ಪಕ್ಷ ಕಟ್ಟುವ ನಿಟ್ಟಿನಲ್ಲಿ ರಾಜ್ಯದಲ್ಲಿ ಭ್ರಷ್ಟ ಕಾಂಗ್ರೆಸ್ ಸರ್ಕಾರದ ವಿರುದ್ಧ ಕೈಗೊಳ್ಳಬೇಕಿರುವ ಹೋರಾಟಗಳತ್ತ ಒಗ್ಗಟ್ಟಿನ ಸಂಕಲ್ಪ ತೊಟ್ಟು ಮುನ್ನಡೆಯೋಣ ಎಂದು ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.

WhatsApp Group Join Now
Telegram Group Join Now
Share This Article