ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪತ್ನಿ ಪಾರ್ವತಿ ಹಾಗೂ ಸಚಿವ ಬೈರತಿ ಸುರೇಶ್ ವಿರುದ್ಧದ ಇಡಿ ಪ್ರಕರಣವನ್ನು ಹೈಕೋರ್ಟ್ ರದ್ದುಗೊಳಿಸಿದೆ. ಮುಡಾ ಪ್ರಕರಣದಲ್ಲಿ ಸಿಎಂ ಪತ್ನಿ ಹಾಗೂ ಸಚಿವ ಬೈರತಿ ಸುರೇಶ್ ವಿರುದ್ಧ ಜಾರಿ ನಿರ್ದೇಶನಾಲಯ ಇಸಿಐಆರ್ ದಾಖಲಿಸಿತ್ತು. ಇದನ್ನು ಕರ್ನಾಟಕ ಹೈಕೋರ್ಟ್ ನ ನ್ಯಾಯಮೂರ್ತಿ ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ಶುಕ್ರವಾರ ರದ್ದುಗೊಳಿಸಿದೆ. ಈ ಸಂಬಂಧ ಅವರಿಬ್ಬರು ಅರ್ಜಿ ಸಲ್ಲಿಸಿದ್ದರು.