Ad imageAd image

ಕರ್ನಾಟಕ ರಾಜ್ಯ ರೈತ ಸಂಘದ ವಿಜಯಪುರ ಜಿಲ್ಲಾಧ್ಯಕ್ಷರ ಉಚ್ಛಾಟನೆ

Nagesh Talawar
ಕರ್ನಾಟಕ ರಾಜ್ಯ ರೈತ ಸಂಘದ ವಿಜಯಪುರ ಜಿಲ್ಲಾಧ್ಯಕ್ಷರ ಉಚ್ಛಾಟನೆ
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ವಿಜಯಪುರ(Vijayapura): ಕರ್ನಾಟಕ ರಾಜ್ಯ ರೈತ ಸಂಘದ ವಿಜಯಪುರ ಜಿಲ್ಲಾಧ್ಯಕ್ಷರಾಗಿದ್ದ ಶಂಕರಗೌಡ ಹಿರೇಗೌಡರ ಅವರನ್ನು ಉಚ್ಛಾಟನೆ ಮಾಡಲಾಗಿದೆ. ಹಂಗಾಮಿ ಅಧ್ಯಕ್ಷರನ್ನಾಗಿ ಬಾಪುಗೌಡ ಬಿರಾದಾರ, ಯುವ ಘಟಕದ ಸಂಚಾಲಕರಾದ ಸಿದ್ದನಗೌಡ ಪಾಟೀಲರನ್ನು ಹಂಗಾಮಿ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ ಎಂದು ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ಡಿ ವಸಂತಕುಮಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಎಪಿಎಂಸಿ ಮರ್ಚೆಂಟ್ ಅಸೋಸಿಯೇಶನ್ ಸಭಾಂಗಣದಲ್ಲಿ ರಾಜ್ಯ ಪದಾಧಿಕಾರಿಗಳ ಸಮ್ಮುಖದಲ್ಲಿ ನಡೆದ ಜಿಲ್ಲಾ ಕಾರ್ಯಕರ್ತರ ಸಭೆಯಲ್ಲಿ ಸಂಘ ವಿರೋಧಿ ಚಟುವಟಿಕೆ ಕಾರಣದಿಂದ ಶಂಕರಗೌಡ ಹಿರೇಗೌಡರನ್ನು ಉಚ್ಛಾಟನೆ ಮಾಡಲಾಗಿದೆ. ಹಂಗಾಮಿ ಮಹಿಳಾ ಜಿಲ್ಲಾಧ್ಯಕ್ಷರನ್ನಾಗಿ ಲಕ್ಷ್ಮಿಬಾಯಿ ಭಜಂತ್ರಿ, ಹಂಗಾಮಿ ಪ್ರಧಾನ ಕಾರ್ಯದರ್ಶಿಯಾಗಿ ಶಾಂತಾ ಕೆರಟೂಗಿ ಅವರನ್ನು ನೇಮಿಸಲಾಗಿದೆ. ಐದು ತಿಂಗಳೊಳಗೆ ಪೂರ್ಣಾವಧಿ ಪದಾಧಿಕಾರಿಗಳನ್ನು ನೇಮಕ ಮಾಡಲಾಗುವುದು ಎಂದು ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ತಿಳಿಸಿದ್ದಾರೆ.

WhatsApp Group Join Now
Telegram Group Join Now
Share This Article