ಪ್ರಜಾಸ್ತ್ರ ಸುದ್ದಿ
ವಿಜಯಪುರ(Nidagundi): ಜಿಲ್ಲೆಯ ನಿಡಗುಂದಿ ಪಟ್ಟಣ ಪಂಚಾಯ್ತಿಯ ವಾರ್ಡ್ ನಂಬರ್ 5ರ ಉಪ ಚುನಾವಣೆಗೆ ಸಂಬಂಧಿಸಿದಂತೆ ಮತದಾರರ ಅಂತಿಮ ಪಟ್ಟಿಯನ್ನು ಜುಲೈ 25ರಂದು ಪ್ರಕಟಿಸಲಾಗಿದೆ. ಕರಡು ಮತದಾರರ ಪಟ್ಟಿಗೆ ಜುಲೈ 24ರವರೆಗೆ ಸ್ವೀಕೃತವಾದ ಆಕ್ಷೇಪಣೆಗಳನ್ನು ಇತ್ಯರ್ಥಪಡಿಸಿ, ಅಂತಿಮ ಮತದಾರರ ಪಟ್ಟಿ ಪ್ರಕಟಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.