ಪ್ರಜಾಸ್ತ್ರ ಸುದ್ದಿ
ವಿಜಯಪುರ(Vijayapura): ಜಿಲ್ಲೆಯ ಸಿಂದಗಿ ತಾಲೂಕಿನ ವಿವಿಧ ಗ್ರಾಮಗಳ ಜನರಿಗೆ ಕಳೆದ ಕೆಲ ದಿನಗಳಿಂದ ಸಾಕಷ್ಟು ಭಯ ಮೂಡಿಸಿದ ಚಿರತೆಯನ್ನು(Leopard) ಹಿಡಿಯಲಾಗಿದೆ. ಅರಣ್ಯ ಇಲಾಖೆಯ ಯಶಸ್ವಿ ಕಾರ್ಯಾಚರಣೆಯಿಂದಾಗಿ ಸೋಮಜಾಳ ಗ್ರಾಮದಲ್ಲಿ ಚಿರತೆ ಸೆರೆ ಹಿಡಿಯಲಾಗಿದೆ. ಇದರಿಂದಾಗಿ ಸಾರ್ವಜನಿಕರಿಗೆ ಆತಂಕ ಕಡಿಮೆಯಾಗಿದೆ.
ಸಿಂದಗಿ ಪ್ರಾದೇಶಿಕ ಅರಣ್ಯ ವಲಯಾಧಿಕಾರಿ ರಾಜೀವ ಬಿರಾದಾರ ನೇತೃತ್ವದಲ್ಲಿ ಸಿಬ್ಬಂದಿ ಚಿರತೆ ಹಿಡಿಯುವಲ್ಲಿ ಯಶಸ್ವಿಯಾಗಿದೆ. ಇವರಿಗೆ ವಿಜಯಪುರ ಉಪ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಮಾರ್ಗದರ್ಶನ ನೀಡಿದ್ದಾರೆ. ಈ ಕಾರ್ಯಾಚರಣೆಯಲ್ಲಿ ಉಪ ವಲಯ ಅರಣ್ಯಾಧಿಕಾರಿ ಪ್ರಿಯಾಂಕ, ಎಸ್.ಎಸ್ ಬಿರಾದಾರ, ಸಿಬ್ಬಂದಿಯಾದ ಬೀರೇಶ ರಾಜೋಳಿ, ಶಿವಾನಂದ ಮದಗೊಂಡ, ಗುರು ರಾಮಗಿಮಠ, ವಿಠ್ಠಲ ಚನ್ನೂರ, ಮತ್ತಪ್ಪ ಕಂಟಿಕರ ಭಾಗವಹಿಸಿದ್ದರು.