ಪ್ರಜಾಸ್ತ್ರ ಸುದ್ದಿ
ಚಿತ್ರದುರ್ಗ(Chitradurga): ಮಾಜಿ ಮುಖ್ಯಮಂತ್ರಿ ದಿವಂಗತ ಎಸ್.ನಿಜಲಿಂಗಪ್ಪನವರ ಮನೆಯನ್ನು ಸರ್ಕಾರ ಖರೀದಿಸಿ ಸಂರಕ್ಷಣೆಗೆ ಮುಂದಾಗಿದೆ. ಡಿಸೆಂಬರ್ 10, 2024ರಂದು ರಾಜ್ಯಪಾಲರ ಹೆಸರಿನಲ್ಲಿ ಖರೀದಿ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದ್ದಾರೆ. 4 ಕೋಟಿ, 18 ಲಕ್ಷದ 49 ಸಾವಿರದ 16 ರೂಪಾಯಿಗಳಿಗೆ ಖರೀದಿಸಲಾಗಿದೆ ಎಂದು ಹೇಳಿದ್ದಾರೆ. ಇತ್ತೀಚೆಗೆ ಮನೆಯನ್ನು ಮಾರಾಟ ಮಾಡಲು ಕುಟುಂಬಸ್ಥರು ಮುಂದಾಗಿದ್ದರು. ಈ ವಿಚಾರ ತಿಳಿದು ಅನೇಕ ರಾಜಕೀಯ ನಾಯಕರು ಸರ್ಕಾರ ಇದನ್ನು ಖರೀದಿಸಿ ಸಂರಕ್ಷಣೆ ಮಾಡಬೇಕು ಎಂದರು. ಅದರಂತೆ ಖರೀದಿಸಲಾಗಿದೆ.
ಈ ಹಿಂದೆ ಸರ್ಕಾರ ಮನೆಯನ್ನು ಖರೀದಿಸಿ ರಕ್ಷಿಸಲು ನಿರ್ಧರಿಸಿತು. ಈ ಸಂಬಂಧ ಅನುದಾನ ಬಿಡುಗಡೆ ಮಾಡಿದೆ. ಹೀಗಾಗಿ ಡಿಸೆಂಬರ್ 10, 2024ರಂದು ರಾಜ್ಯಪಾಲರ ಹೆಸರಿನಲ್ಲಿ ಮನೆ ಖರೀದಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಮುಂದೆ ಈ ಮನೆ ಪಾರಂಪರಿಕ ತಾಣವಾಗಿ ಸಾರ್ವಜನಿಕರ ವೀಕ್ಷಣೆಗೂ ಅವಕಾಶ ಸಿಗಬಹುದು.