ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ಆರ್ ಸಿಬಿ ವಿಜಯೋತ್ಸವದ ವೇಳೆ ನಡೆದ ಕಾಲ್ತುಳಿತ ಪ್ರಕರಣದಲ್ಲಿ 11 ಜನರು ಮೃತಪಟ್ಟಿದ್ದಾರೆ. ಮೃತರ ಕುಟುಂಬಸ್ಥರಿಗೆ ಸರ್ಕಾರದಿಂದ ಮೊದಲು 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಿತ್ತು. ಇದೀಗ ಅದನ್ನು 25 ಲಕ್ಷ ರೂಪಾಯಿಗೆ ಹೆಚ್ಚಿಸಿದೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ತಮ್ಮವರನ್ನು ಕಳೆದುಕೊಂಡು ನೊಂದಿರುವ ಕುಟುಂಬಗಳು ಆರ್ಥಿಕ ಸಮಸ್ಯೆಯಿಂದ ಮತ್ತಷ್ಟು ಸಂಕಷ್ಟಕ್ಕೆ ಒಳಗಾಗದಿರಲಿ ಎನ್ನುವುದು ನಮ್ಮ ಸರ್ಕಾರದ ಆಶಯ ಎಂದಿದ್ದಾರೆ.
ಸರ್ಕಾರದ ವಿರುದ್ಧ ವಿಪಕ್ಷಗಳು ತೀವ್ರ ವಾಗ್ದಾಳಿ ನಡೆಸಿವೆ. ಪರಿಹಾರದ ಮೊತ್ತವನ್ನು ಹೆಚ್ಚಿಸಬೇಕು ಎಂದು ಈ ಮೊದಲೇ ಆಗ್ರಹಿಸಿದ್ದವು. ಅಲ್ಲದೆ ಸಿಎಂ, ಡಿಸಿಎಂ ಅವರ ತಪ್ಪಿಗೆ ಪೊಲೀಸರನ್ನು ಇಲ್ಲಿ ಬಲಿಪಶು ಮಾಡಲಾಗಿದೆ. ಬೇಜವಾಬ್ದಾರಿ ಸರ್ಕಾರದಿಂದ 11 ಜನರು ಪ್ರಾಣ ಕಳೆದುಕೊಳ್ಳುವಂತಾಯಿತು ಎಂದು ಕಿಡಿ ಕಾರಿದ್ದಾರೆ. ಈ ಬಗ್ಗೆ ಸಿಐಡಿ ತನಿಖೆ ನಡೆಸಲಾಗುತ್ತಿದೆ ಎಂದು ಸರ್ಕಾರ ಹೇಳಿದೆ.