Ad imageAd image

ಕಾಲ್ತುಳಿತ ಪ್ರಕರಣ: ಪೊಲೀಸ್ ಇಲಾಖೆಯ ತಲೆದಂಡ

Nagesh Talawar
ಕಾಲ್ತುಳಿತ ಪ್ರಕರಣ: ಪೊಲೀಸ್ ಇಲಾಖೆಯ ತಲೆದಂಡ
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ಬೆಂಗಳೂರು(Bengaloru): ಬುಧವಾರ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಕಾಂಗ್ರೆಸ್ ಸರ್ಕಾರ ಪೊಲೀಸ್ ಇಲಾಖೆಯ ಮೇಲೆ ಇದರ ಹೊಣೆಯನ್ನು ಎತ್ತಿ ಹಾಕಿದೆ. ಹೀಗಾಗಿ ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಬಿ.ದಯಾನಂದ್ ಸೇರಿ ಹಲವು ಅಧಿಕಾರಿಗಳನ್ನು ಅಮಾನತು ಮಾಡಿದೆ. ಸಚಿವ ಸಂಪುಟ ಸಭೆಯ ಬಳಿಕ ಮಾತನಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಈ ಬಗ್ಗೆ ತಿಳಿಸಿದ್ದಾರೆ.

ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್, ಆ ಭಾಗದ ಎಸಿಪಿ, ಕೇಂದ್ರ ಡಿಸಿಪಿ, ಕ್ರೀಡಾಂಗಣದ ಉಸ್ತುವಾರಿ ವಹಿಸಿದ್ದ ಹೆಚ್ಚುವರಿ ಪೊಲೀಸ್ ಆಯುಕ್ತರು ಹಾಗೂ ಬೆಂಗಳೂರು ನಗರ ಪೊಲೀಸ್ ಆಯುಕ್ತರನ್ನು ತಕ್ಷಣದಿಂದ ಅಮಾನತುಗೊಳಿಸಲಾಗಿದೆ. ಮೇಲ್ನೋಟಕ್ಕೆ ಅಧಿಕಾರಿಗಳ ಬೇಜವಾಬ್ದಾರಿತನ, ಅಲಕ್ಷ್ಯ ಕಂಡು ಬರುತ್ತಿದೆ. ಹೈಕೋರ್ಟ್ ನಿವೃತ್ತ ನ್ಯಾಯಾಧೀಶರಾದ ಜಸ್ಟೀಸ್ ಮೈಕೆಲ್ ಕುನ್ಹಾ ಅವರ ನೇತೃತ್ವದ ಏಕಸದಸ್ಯ ಆಯೋಗ ರಚಿಸಿ ತನಿಖೆ ನಡೆಸಲಾಗುತ್ತಿದೆ ಎಂದಿದ್ದಾರೆ.

ಆರ್ ಸಿಬಿ ಸಂಸ್ಥೆ, ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ, ಕಾರ್ಯಕ್ರಮ ಆಯೋಜಿಸಿದ್ದ ಡಿಎನ್ಎ ಈ ಮೂರು ಸಂಸ್ಥೆಗಳ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಕಾನೂನು ಕ್ರಮ ತೆಗೆದುಕೊಂಡು ಬಂಧಿಸಲು ಹೇಳಲಾಗಿದೆ. ಸಿಐಡಿ ತನಿಖೆ ನಡೆಸುತ್ತಿದೆ. ಈ ಘಟನೆ ನನ್ನನ್ನು ಘಾಸಿಗೊಳಿಸಿದೆ. ಮೃತಪಟ್ಟವರ ಕುಟುಂಬದ ಜೊತೆಗೆ ಸರ್ಕಾರವಿದೆ ಎನ್ನುವ ಭರವಸೆ ನೀಡುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

WhatsApp Group Join Now
Telegram Group Join Now
Share This Article