ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ಓಬಳಾಪುರಂ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಸಿಬಿಐ ಕೋರ್ಟ್ ಮಾಜಿ ಸಚಿವ, ಶಾಸಕ ಗಾಲಿ ಜನಾರ್ದನ್ ರೆಡ್ಡಿಗೆ ವಿಧಿಸಿದ್ದ ಶಿಕ್ಷೆಯನ್ನು ತೆಲಂಗಾಣ ಹೈಕೋರ್ಟ್ ರದ್ದುಗೊಳಿಸಿದೆ. ಹೀಗಾಗಿ ಜನಾರ್ದನ್ ರೆಡ್ಡಿಗೆ ದೊಡ್ಡ ನಿರಾಳತೆ ತಂದಿದೆ. ದೇಶ ಬಿಟ್ಟು ಹೋಗದಂತೆ ಸೂಚಿಸಿದ್ದು ಪಾಸ್ ಪೋರ್ಟ್ ಕೊಡಲು ಹೇಳಿದೆ. 2 ಲಕ್ಷ ರೂಪಾಯಿ 2 ಶ್ಯೂರಿಟಿ ನೀಡಲು ಹೇಳಿದೆ.
ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಸುದೀರ್ಘ ತನಿಖೆ ನಡೆದಿತ್ತು. ಹೈದ್ರಾಬಾದ್ ಸಿಬಿಐ ಕೋರ್ಟ್ ಜನಾರ್ದನ್ ರೆಡ್ಡಿಗೆ 7 ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸಿತ್ತು. ಅಲ್ಲದೇ ಇನ್ನು ನಾಲ್ವರು ಅಪರಾಧಿಗಳು ಎಂದು ತೀರ್ಪು ಪ್ರಕಟಿಸಿ ಶಿಕ್ಷೆ ವಿಧಿಸಿತ್ತು. ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಆಡಳಿತ ಅವಧಿಯಲ್ಲಿ ಆಂಧ್ರ ಹಾಗೂ ಕರ್ನಾಟಕ ಗಡಿ ಭಾಗದ ಓಬಳಾಪುರಂನಲ್ಲಿ ಅಕ್ರಮ ಅದಿರು ಗಣಿಗಾರಿಕೆ ಪ್ರಕರಣದಲ್ಲಿ ಜನಾರ್ದನ್ ರೆಡ್ಡಿ ಅಪರಾಧಿ ಎಂದು ಸಿಬಿಐ ಕೋರ್ಟ್ ತೀರ್ಪು ನೀಡಿತ್ತು.