ಪ್ರಜಾಸ್ತ್ರ ಸುದ್ದಿ
ನವದೆಹಲಿ(New Delhi): ಉತ್ತರಕಾಶಿಯಲ್ಲಿ ಭಾರೀ ಮೇಘಸ್ಫೋಟವಾಗಿದೆ. ಇದು ಎಷ್ಟೊಂದು ಭಯಾನಕವಾಗಿದೆ ಅನ್ನೋದು ವಿಡಿಯೋ ಮೂಲಕ ತಿಳಿದಿದೆ. ಸಾಕಷ್ಟು ವೈರಲ್ ಆಗಿರುವ ವಿಡಿಯೋ ನೋಡಿದ ಜನರು ಒಂದು ಕ್ಷಣ ಬೆಚ್ಚಿಬಿದ್ದಿದ್ದಾರೆ. ನೋಡು ನೋಡುತ್ತಿದ್ದಂತೆ ಬೃಹತ್ ಮನೆಗಳು ಕೊಚ್ಚಿಕೊಂಡು ಹೋಗಿವೆ. ಖೀರಗಂಗಾ ನದಿಯ ಜಲಾನಯನ ಪ್ರದೇಶದಲ್ಲಿ ಈ ಘಟನೆ ನಡೆದಿದೆ.
ಈ ದುರಂತದಲ್ಲಿ ಐವರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಹರ್ಸಿಲ್ ನಿಂದ ಸೇನೆಯ ತುಕಡಿಯನ್ನು ರಕ್ಷಣಾ ಕಾರ್ಯಾಚರಣೆಗೆ ಕಳಿಸಲಾಗಿದೆ. 20-25 ಹೋಟೆಲ್, ಹೋಂ ಸ್ಟೇಗಳು ಕೊಚ್ಚಿಕೊಂಡು ಹೋಗಿವೆ. 100ಕ್ಕೂ ಹೆಚ್ಚು ಪ್ರವಾಸಿಗರು ಕಟ್ಟಡಗಳ ಅವಶೇಷಗಳಡಿಯಲ್ಲಿ ಸಿಲಿಕೊಂಡಿರಬಹುದು ಎಂದು ಹೇಳಲಾಗುತ್ತಿದೆ. ಬೆಟ್ಟದ ಮೇಲಿಂದ ಮಣ್ಣು ಮಿಶ್ರಿತ ನೀರು ಹರಿದು ಬಂದ ರೀತಿ ಎಂತವರ ಎದೆಯನ್ನು ಸಹ ಕಂಪಿಸುತ್ತೆ.