Ad imageAd image

ಪೊಲೀಸ್ ಅಧಿಕಾರಿಗೆ ಸಿಎಂ ಹೊಡೆಯಲು ಹೋದ ಘಟನೆ, ದೂರು ದಾಖಲು

Nagesh Talawar
ಪೊಲೀಸ್ ಅಧಿಕಾರಿಗೆ ಸಿಎಂ ಹೊಡೆಯಲು ಹೋದ ಘಟನೆ, ದೂರು ದಾಖಲು
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ಬೆಳಗಾವಿ(Belagavi): ಕಳೆದ ಏಪ್ರಿಲ್ 28ರಂದು ನಗರದಲ್ಲಿ ನಡೆದ ಕಾಂಗ್ರೆಸ್ ಸಮಾವೇಶದ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಧಾರವಾಡ ಎಎಸ್ಪಿ ನಾರಾಯಣ ಭರಮನಿ ಅವರ ಮೇಲೆ ಹೊಡೆಯಲು ಹೋದ ಘಟನೆ ನಡೆದಿತ್ತು. ಈ ಘಟನೆ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಆರ್ ಟಿಐ ಕಾರ್ಯಕರ್ತ ಭೀಮಪ್ಪ ಗಡಾದ ಎಂಬುವರು ಮಾನವ ಹಕ್ಕುಗಳ ಆಯೋಗ, ಕ್ಯಾಂಪ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಮುಖ್ಯಮಂತ್ರಿಯಾಗಿ ಜವಾಬ್ದಾರಿಯುತ ವ್ಯಕ್ತಿಯಾಗಿ ನಾಡಿನ ಸಮಸ್ತ ಚಿಂತನೆ, ಮಂಥನೆಗಳಿಗೆ ಧ್ವನಿಯಾಗುವುದರ ಮೂಲಕ ಕಾರ್ಯಾಂಗದ ಅಧಿಕಾರಿಗಳನ್ನು ಉತ್ತೇಜಿಸುವುದನ್ನು ಮರೆತು, ಕರ್ತವ್ಯ ನಿರತ ಅಧಿಕಾರಿಗೆ ಕೀಳು ಪದಗಳನ್ನು ಬಳಕೆ ಮಾಡಿದ್ದಲ್ಲದೇ ಗದರಿಸುವ ಧ್ವನಿಯಲ್ಲಿ ಪೊಲೀಸ್ ಸಮವಸ್ತ್ರದ ಮೇಲಿರುವ ಅವರನ್ನು ಹೊಡೆಯಲು ಹೋಗಿ ಅವರ ಆತ್ಮಸ್ಥರ್ಯವನ್ನು ಕುಗ್ಗಿಸುವಂಥ ಕೆಲಸ ಮಾಡಿದ್ದಾರೆ ಎಂದು ಸಲ್ಲಿಸಲಾದ ದೂರಿನಲ್ಲಿ ತಿಳಿಸಲಾಗಿದೆ.

ಅಂದು ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಬಿಜೆಪಿ ಕಾರ್ಯಕರ್ತರು ನುಗ್ಗಿ ಪ್ರತಿಭಟನೆ ಮಾಡಿದ್ದರು. ಇದರಿಂದ ಸಿಟ್ಟಾದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಾತನಾಡುತ್ತಿದ್ದ ಸಂದರ್ಭದಲ್ಲಿಯೇ ಪೊಲೀಸ್ ಅಧಿಕಾರಿಯನ್ನು ಕರೆದು ಗದರಿದರು. ಅಲ್ಲದೇ ಕೈ ಎತ್ತಿ ಹೊಡೆಯಲು ಹೋಗಿದ್ದರು. ಇದು ಸಾಕಷ್ಟು ವೈರಲ್ ಆಗಿತ್ತು.

WhatsApp Group Join Now
Telegram Group Join Now
Share This Article