ಪ್ರಜಾಸ್ತ್ರ ಸುದ್ದಿ
ವಿಜಯಪುರ(Vijayapura): ಬಿಜೆಪಿ ಪಕ್ಷದಿಂದ ಉಚ್ಛಾಟನೆಯಾದ ಬಳಿಕ ವಿಜಯಪುರಕ್ಕೆ ಬಂದ ಶಾಸಕ ಬಸನಗೌಡ ಪಾಟೀಲ ಯತ್ನಾಳ, ಸಿದ್ದೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದರು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹೊಸ ಪಕ್ಷ ಸ್ಥಾಪನೆ ಮಾಡಬೇಕು ಅನ್ನೋ ಮಾತುಗಳು ಕೇಳಿ ಬರುತ್ತವೆ. ಜನಾಭಿಪ್ರಾಯ ಸಂಗ್ರಹಿಸುತ್ತೇನೆ. ಬಿಜೆಪಿಯಿಂದ ಹಿಂದುಗಳ ರಕ್ಷಣೆಯಾಗಲ್ಲ. ಹೊಸ ಪಕ್ಷ ಕಟ್ಟುವ ಅನಿವಾರ್ಯತೆ ಬಂದಿದೆ ಎಂದಿದ್ದಾರೆ.
ರಾಜ್ಯದಲ್ಲಿ ನನ್ನ ಬಗ್ಗೆ ಒಳ್ಳೆಯ ಅಭಿಪ್ರಾಯವಿದೆ. ಹೊರ ದೇಶದಲ್ಲಿರುವ ಕನ್ನಡಿಗರ ಫೋನ್ ಮಾತನಾಡಿದ್ದಾರೆ. ಹೊಸ ಪಕ್ಷ ಮಾಡಿದರೆ ಬೆಂಬಲ ನೀಡುವುದಾಗಿ ಹೇಳಿದ್ದಾರೆ. ದೇಣಿಗೆ ಕೊಡಲು ಸಹ ಮುಂದೆ ಬಂದಿದ್ದಾರೆ. ವಿಜಯದಶಮಿ ದಿನ ಹೊಸ ಪಕ್ಷ ಉದಯವಾಗಲಿದೆ. ಬಿಜೆಪಿ ಹೈಕಮಾಂಡ್ ವಿಜಯೇಂದ್ರ ಅಂತಾ ಹೋದರೆ ಅದೋಗತಿಗೆ ಹೋಗುತ್ತದೆ. ಕಾಂಗ್ರೆಸ್ ಜೊತೆಗೆ ವಿಜಯೇಂದ್ರ ಹೊಂದಾಣಿಕೆ ಮಾಡಿಕೊಂಡಿದ್ದಾನೆ. ನಾನು ಪಕ್ಷ ವಿರೋಧಿ ಅಲ್ಲ. ಯಡಿಯೂರಪ್ಪ ವಿರೋಧಿ.
ಲೋಕಸಭೆ ಚುನಾವಣೆಯಲ್ಲಿ ಹಲವು ಕ್ಷೇತ್ರಗಳಲ್ಲಿ ಬಿಜೆಪಿ ಸೋಲಲು ಯಡಿಯೂರಪ್ಪ ಹಾಗೂ ವಿಜಯೇಂದ್ರ ಒಳ ಒಪ್ಪಂದವೇ ಕಾರಣ. ಗೋವಿಂದ್ ಕಾರಜೋಳ ವಿರುದ್ಧ ಪ್ರಚಾರ ಮಾಡಿದವರನ್ನು ಬಿಜೆಪಿ ಜಿಲ್ಲಾಧ್ಯಕ್ಷರನ್ನಾಗಿ ನೇಮಕ ಮಾಡಿದ್ದಾರೆ ಅನ್ನೋ ಗಂಭೀರವಾಗಿ ಆರೋಪ ಮಾಡಿದ್ದಾರೆ. ರಮೇಶ ಜಾರಕಿಹೊಳಿ, ರಾಜಣ್ಣ ಹನಿ ಟ್ರ್ಯಾಪ್ ಹಿಂದೆ ಡಿಕೆಶಿ ಕೈವಾಡವಿದೆ ಎಂದು ಮುನಿರತ್ನ ಹೇಳಿದ್ದಾರೆ. ಸಿಬಿಐ ತನಿಖೆ ಆಗಬೇಕೆಂದು ಆಗ್ರಹಿಸಿದ್ದಾರೆ.