ಪ್ರಜಾಸ್ತ್ರ ಸುದ್ದಿ
ಕೊಲ್ಕತ್ತಾ(Kolkata): ಸರ್ಕಾರಿ ಕಾರ್ ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆಯಲ್ಲಿ ಟ್ರೇನಿ ಮಹಿಳಾ ವೈದ್ಯಗೆ(Doctor) ಸಂಬಂಧಿಸಿದಂತೆ ನಡೆಯುತ್ತಿರುವ ಹೋರಾಟ ತೀವ್ರಗೊಂಡಿದೆ. ನರ್ಸಿಂಗ್ ವಿದ್ಯಾರ್ಥಿಗಳು ಬೃಹತ್ ಪ್ರತಿಭಟನೆ ನಡೆಸಿದ್ದು, ವಿದ್ಯಾರ್ಥಿನಿಗೆ ನ್ಯಾಯ ಸಿಗಬೇಕೆಂದು ಆಗ್ರಹಿಸಿ ಪ್ರತಿಭಟನೆ ನಡೆಸಲಾಗುತ್ತಿದೆ.
ಎಸ್ಎಫ್ಐ(SFI) ಹಾಗೂ ಡಿವೈಎಫ್ಐ(DYFI) ಘಟನೆಯನ್ನು ಖಂಡಿಸಿದ್ದು, ಪಶ್ಚಿಮ(West bengal) ಬಂಗಾಳದಾದ್ಯಂತ ರಸ್ತೆ ತಡೆ ನಡೆಸಲಾಗುವುದು ಎಂದು ಶನಿವಾರ ತಿಳಿಸಿವೆ. ಇನ್ನು ಸಿಪಿಐ(ಎಂ)(CPIM)ನ ವಿದ್ಯಾರ್ಥಿ ಘಟಕವೂ ಸರ್ಕಾರದ ವಿರುದ್ಧ ಕಿಡಿ ಕಾರಿದ್ದು ರಸ್ತೆ ತಡೆಗೂ ತಮ್ಮದ ಬೆಂಬಲ ಇರಲಿದೆ ಎಂದು ತಿಳಿಸಿದೆ. ಮರಣೋತ್ತರ ಪರೀಕ್ಷೆಯಲ್ಲಿ ಲೈಂಗಿಕ ದೌರ್ಜನ್ಯವೆಸಗಲಾಗಿದೆ ಎಂದು ತಿಳಿದು ಬಂದಿದೆ ಅಂತಾ ಪೊಲೀಸರು ತಿಳಿಸಿದ್ದಾರೆ.
ಮೃತ ವಿದ್ಯಾರ್ಥಿನಿ ಔಷಧ ವಿಭಾಗದಲ್ಲಿ ದ್ವಿತೀಯ ವರ್ಷ ಓದುತ್ತಿದ್ದರು. ಸ್ನಾತಕೋತ್ತರ ತರಬೇತಿ ಹಿನ್ನಲೆಯಲ್ಲಿ ಉತ್ತರ ಕೋಲ್ಕತ್ತಾದಲ್ಲಿರುವ ಸರ್ಕಾರ ಸ್ವಾಮ್ಯದ ಕಾರ್ ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆಯಲ್ಲಿ ಕರ್ತವ್ಯದಲ್ಲಿದ್ದರು. ಶುಕ್ರವಾರ ಆಸ್ಪತ್ರೆಯ ಸೆಮಿನಾರ್ ಹಾಲ್ ನಲ್ಲಿ ಅರೆನಗ್ನ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿತ್ತು. ಮಗಳ ಮೇಲೆ ಅತ್ಯಾಚಾರವೆಸಗಿ ಹತ್ಯೆ ಮಾಡಲಾಗಿದೆ ಎಂದು ತಂದೆ ಆರೋಪಿಸಿದ್ದಾರೆ.