Ad imageAd image

ಚಿರತೆ ಪ್ರತ್ಯಕ್ಷ, ಜನರಲ್ಲಿ ಮೂಡಿದ ಭಯ..

ಜಿಲ್ಲೆಯ ಸುತ್ತಮುತ್ತ ಯಾವುದೇ ರೀತಿಯ ದಡ್ಡ ಕಾಡು, ಅರಣ್ಯ ಪ್ರದೇಶವಿಲ್ಲ. ಹೀಗಾಗಿ ಈ ಭಾಗದಲ್ಲಿ ಕಾಡು ಪ್ರಾಣಿಗಳ ಹಾವಳಿ ಇಲ್ಲ ಎಂದುಕೊಳ್ಳುತ್ತಿರುವಾಗಲೇ ಈಗ

Nagesh Talawar
ಚಿರತೆ ಪ್ರತ್ಯಕ್ಷ, ಜನರಲ್ಲಿ ಮೂಡಿದ ಭಯ..
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ವಿಜಯಪುರ(Vijayapura): ಜಿಲ್ಲೆಯ ಸುತ್ತಮುತ್ತ ಯಾವುದೇ ರೀತಿಯ ದಡ್ಡ ಕಾಡು, ಅರಣ್ಯ ಪ್ರದೇಶವಿಲ್ಲ. ಹೀಗಾಗಿ ಈ ಭಾಗದಲ್ಲಿ ಕಾಡು ಪ್ರಾಣಿಗಳ ಹಾವಳಿ ಇಲ್ಲ ಎಂದುಕೊಳ್ಳುತ್ತಿರುವಾಗಲೇ ಈಗ ಚಿರತೆ(Leopard), ತನ್ನ ಮರಿಗಳೊಂದಿಗೆ ಕಾಣಿಸಿಕೊಳ್ಳುವ ಮೂಲಕ ಜನರಲ್ಲಿ ಭಯ ಮೂಡಿಸಿದೆ. ಜಿಲ್ಲೆಯ ಕೊಲ್ಹಾರ ತಾಲೂಕಿನ ನಾಗರದಿನ್ನಿ ಗ್ರಾಮದ ಜಮೀನುವೊಂದರಲ್ಲಿ ಸೋಮವಾರ ರಾತ್ರಿ ಚಿರತೆಯೊಂದು ಮರಿಗಳೊಂದಿಗೆ ಕಾಣಿಸಿಕೊಂಡಿದೆ. ಇದರ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಮಹದೇವ ಕೋಲ್ಕಾರ್ ಎಂಬುವರು ತಮ್ಮ ಜಮೀನಿನಲ್ಲಿ ಸಿಸಿಟಿವಿ(CCTV) ಅಳವಡಿಸಿದ್ದಾರೆ. ಇದರಲ್ಲಿ ಚಿರತೆ ಹಾಗೂ ಅದರ ಮರಿಗಳ ದೃಶ್ಯ ಸೆರೆಯಾಗಿದೆ. ಇದರಿಂದಾಗಿ ಗ್ರಾಮಸ್ಥರ ಆತಂಕ ಮನೆ ಮಾಡಿದೆ. ಈ ಬಗ್ಗೆ ಅರಣ್ಯ ಇಲಾಖೆಗೆ ಮಾಹಿತಿ ನೀಡಲಾಗಿದೆ. ಅರಣ್ಯಾಧಿಕಾರಿ ಬಸವರಾಜ ಕೊಣ್ಣೂರ, ತಹಶೀಲ್ದಾರ್ ಎಸ್.ಎಸ್ ನಾಯಕಲಮಠ ಸೇರಿ ಇತರೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಈ ಬಗ್ಗೆ ಅಗತ್ಯ ಕ್ರಮ ತೆಗೆದುಕೊಳ್ಳುವುದಾಗಿ ತಿಳಿಸಿದ್ದಾರೆ.

WhatsApp Group Join Now
Telegram Group Join Now
Share This Article